ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದ ಆರೋಪಿಗಳು ನಟ ದರ್ಶನ್ ಸೇರಿದಂತೆ ಈಗಾಗಲೇ 13 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಇನ್ನೂ ನಾಲ್ವರು ತಲೆ ಮರೆಸಿಕೊಂಡಿದ್ದಾರೆ ಎನ್ನಲಾಗಿದೆ.
ದರ್ಶನ್ ಸ್ನೇಹಿತೆ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎಂಬ ಕಾರಣಕ್ಕೆ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಅಪಹರಿಸಿ, ಚಿತ್ರಹಿಂಸೆ ನೀಡಿ ಹತ್ಯೆ ಮಾಡಲಾಗಿತ್ತು ಎನ್ನಲಾಗಿದೆ. ಆನಂತರ ಶವವನ್ನು ರಾಜಕಾಲುವೆಗೆ ಎಸೆಯಲಾಗಿದೆ. ಸದ್ಯ ಈ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ ಹಲವರು ಕೈ ಜೋಡಿಸಿದ್ದು ಬೆಳಕಿಗೆ ಬಂದಿದೆ. ತನಿಖೆ ಚುರುಕಾದಂತೆಲ್ಲ ಬೇರೆ ಬೇರೆ ಹೆಸರುಗಳು ಹೊರಬರುತ್ತಿವೆ.
ಈಗ ಹೊಸದಾಗಿ ಈ ಪ್ರಕರಣದಲ್ಲಿ ಜಗದೀಶ್ ಅಲಿಯಾಸ್ ಜಗ್ಗ, ಅನು, ರವಿ, ರಾಜು ಎಂಬ ನಾಲ್ಕು ಜನರ ಹೆಸರಗಳು ಕೇಳಿ ಬಂದಿವೆ. ಆದರೆ, ಅವರೆಲ್ಲ ನಾಪತ್ತೆಯಾಗಿದ್ದಾರೆ. ಹೀಗಾಗಿ ಪೊಲೀಸರು ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ.
ಈ ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಆಗಿದ್ದಾಳೆ. ದರ್ಶನ್ ಎ2 ಹಾಗೂ ಕೆ.ಪವನ್ ಎ3, ರಾಘವೇಂದ್ರ ಎ4, ನಂದೀಶ್ ಎ5, ಜಗದೀಶ್ ಅಲಿಯಾಸ್ ಜಗ್ಗ ಎ6, ಅನು ಎ7, ರವಿ ಎ8, ರಾಜು ಎ9, ವಿನಯ್ ಎ10, ನಾಗರಾಜ್ ಎ11, ಲಕ್ಷ್ಮಣ್ ಎ12, ದೀಪಕ್ ಎ13, ಪ್ರದೋಶ್ ಎ14, ಕಾರ್ತಿಕ್ ಎ15, ಕೇಶವ ಮೂರ್ತಿ ಎ16, ನಿಖಿಲ್ ನಾಯಕ್ ಎ17 ಆಗಿದ್ದಾರೆ. ಈಗಾಗಲೇ 13 ಜನ ಪೊಲೀಸ್ ವಶದಲ್ಲಿದ್ದಾರೆ.