ಬೆಂಗಳೂರು: ರಾಮಲಿಂಗಂ ಕನ್ಸ್ಟ್ರಕ್ಷನ್ ಕಂಪನಿ ಅಕ್ರಮ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ರಾಜ್ಯ ಸರ್ಕಾರ ಮತ್ತೆ ಪ್ರಾಸಿಕ್ಯೂಷನ್ಗೆ ಅನುಮತಿಗೆ ಮನವಿ ಮಾಡಿದೆ.
ಹಿಂದೆ ತಿರಸ್ಕಾರವಾಗಿದ್ದ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್, ಮತ್ತೆ ಪುನರ್ ಪರಿಶೀಲನೆ ಮಾಡುವಂತೆ ರಾಜ್ಯಪಾಲರಿಗೆ ಕ್ಯಾಬಿನೆಟ್ ಮನವಿ ಮಾಡಿದೆ.
ಸಚಿವ ಸಂಪುಟದ ನಂತರ ಮಾತನಾಡಿದ ಎಚ್.ಕೆ. ಪಾಟೀಲ್, ರಾಮಲಿಂಗಂ ಕಂಪನಿ ಅಕ್ರಮದ ಕುರಿತು ಟಿ.ಜೆ. ಅಬ್ರಾಹಂ ಅವರು 2020ರ ನ.19ರಂದು ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ಎಸಿಬಿಗೆ ದೂರು ನೀಡಿದ್ದರು. ತನಿಖೆ ನಡೆಸಲು ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಮಾಡಲಾಗಿತ್ತು. ಅಂದು ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಲು ನಿರಾಕರಿಸಿದ್ದರು. ಹೀಗಾಗಿ ಮತ್ತೆ ಪುನರ್ ಪರಿಶೀಲನೆಗೆ ರಾಜ್ಯಪಾಲರಿಗೆ ಕ್ಯಾಬಿನೆಟ್ ಮನವಿ ಮಾಡಿದೆ ಎಂದು ಸ್ಪಷ್ಟಪಡಿಸಿದರು.