ಮಂಡ್ಯ : ಕಾವೇರಿ ನದಿಯಲ್ಲಿ ಪ್ರವಾಹಕ್ಕೆ ಸಿಲುಕಿದ್ದ ಅರಿಚಿತ ಮಹಿಳೆಯನ್ನು ರಕ್ಷಿಸಿರುವ ಘಟನೆ ನಡೆದಿದೆ.
ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಬಳಿ ಈ ಘಟನೆ ನಡೆದಿದೆ. ನದಿಯ ಮದ್ಯೆ ಸಿಲುಕಿದ್ದ ಮಹಿಳೆ ಸಹಾಯಕ್ಕಾಗಿ ಅಂಗಲಾಚುತ್ತಿದ್ದರು ಎನ್ನಲಾಗಿದೆ. ಮಹಿಳೆಯ ಕಿರುಚಾಟ ಕೇಳಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಮಹಿಳೆಯನ್ನು ರಕ್ಷಿಸಿದ್ದಾರೆ.
ನದಿ ಮದ್ಯೆ ಇದ್ದ ಮಹಿಳೆಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅರಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.



















