ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ನ್ಯಾಷನಲ್ ಸೆಂಟರ್ ಫಾರ್ ಬಯಾಲಜಿಕಲ್ ಸೈನ್ಸಸ್ (NCBS Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ ಒಂದು ರಿಸರ್ಚ್ ಅಸಿಸ್ಟಂಟ್ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆಸಕ್ತಿ ಇರುವ ಹಾಗೂ ಅರ್ಹ ಅಭ್ಯರ್ಥಿಗಳು ಆಗಸ್ಟ್ 31ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ನ್ಯಾಷನಲ್ ಸೆಂಟರ್ ಫಾರ್ ಬಯಾಲಜಿಕಲ್ ಸೈನ್ಸಸ್ (NCBS)
ಹುದ್ದೆಗಳ ಹೆಸರು: ರಿಸರ್ಚ್ ಅಸಿಸ್ಟಂಟ್
ಒಟ್ಟು ಹುದ್ದೆಗಳು: 01
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಆಗಸ್ಟ್ 31
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ. 2025ರ ಜುಲೈ 1ಕ್ಕೆ ಅನ್ವಯವಾಗುವಂತೆ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಮೊದಲಿಗೆ ncbs.res.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನೋಂದಣಿ ಮಾಡಿಕೊಂಡ ಬಳಿಕ ಐಡಿ, ಪಾಸ್ ವರ್ಡ್ ಸಿಗುತ್ತದೆ
ಐಡಿ ಪಾಸ್ ವರ್ಡ್ ಮೂಲಕ ಲಾಗಿನ್ ಆಗಿ, Submit Application ಮೇಲೆ ಕ್ಲಿಕ್ ಮಾಡಬೇಕು
ಅರ್ಜಿಯನ್ನು ಭರ್ತಿ ಮಾಡಿದ ಬಳಿಕ Submit ಮಾಡಬೇಕು
ಅರ್ಜಿ ಸಲ್ಲಿಸುವಾಗ ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು



















