ಬೆಂಗಳೂರು: ಸಿವಿಲ್ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಂರಿಗೆ (Muslim) ಶೇ. 4ರಷ್ಟು ಮೀಸಲಾತಿ ನೀಡುವುದಕ್ಕೆ ಸರ್ಕಾರ ಮುಂದಿಗಿದೆ ಎಂಬ ವಿಚಾರ ಬಹಿರಂಗವಾಗಿತ್ತು. ಸದ್ಯ ಈ ವಿಚಾರವಾಗಿ ಸಿಎಂ ಕಚೇರಿ ಸ್ಪಷ್ಟನೆ ನೀಡಿದೆ.
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಮತದಾನ ಒಂದು ದಿನ ಬಾಕಿ ಇರುವಾಗಲೇ ಮೀಸಲಾತಿ ವಿಚಾರ ಮುನ್ನಲೆಗೆ ಬಂದಿದ್ದು, ಕಾಂಗ್ರೆಸ್ (Congress) ಸರ್ಕಾರವನ್ನು ಸಂಕಷ್ಟಕ್ಕೆ ಸಿಲುಕಿಸಲು ಯತ್ನಿಸಲಾಗಿತ್ತು ಎನ್ನಲಾಗಿದೆ. ಹೀಗಾಗಿ ಈ ವಿಚಾರವಾಗಿ ಸರ್ಕಾರ ಸ್ಪಷ್ಟನೆ ನೀಡಿದೆ.
ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡಬೇಕೆಂಬ ಬೇಡಿಕೆ ಇದೆ. ಆದರೆ ರಾಜ್ಯ ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇದುವರೆಗೂ ಬಂದಿಲ್ಲ. ಶೇ. 4ರಷ್ಟು ಮೀಸಲಾತಿಗಾಗಿ ಅಲ್ಪಸಂಖ್ಯಾತ ಶಾಸಕರು, ಸಚಿವರು ನೀಡಿರುವ ಪ್ರಸ್ತಾವನೆಗೆ ಸಿಎಂ ಸಿದ್ದರಾಮಯ್ಯ ಅವರು ಸಹಿ ಹಾಕಿ, ಕಡತ ಮಂಡಿಸಲು ಸೂಚಿಸಿದ್ದಾರೆ ಎಂದು ಹೇಳಲಾಗಿದೆ.
ಪ್ರವರ್ಗ 2ಬಿ ಅಡಿ 1 ಕೋಟಿ ರೂ. ವರೆಗಿನ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಮುಸ್ಲಿಂ ಸಚಿವರು ಮತ್ತು ಶಾಸಕರು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು. ಅದರಂತೆ ಕಾಯ್ದೆಗೆ ತಿದ್ದುಪಡಿ ಮಾಡಿ ಕಡತ ಮಂಡಿಸಲು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

















