ಬೆಂಗಳೂರು : ಸರ್ಕಾರಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ಲಭಿಸಿದೆ. ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ (RBI Recruitment 2026) ಖಾಲಿ ಇರುವ 21 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಗ್ರೇಡ್ ಎ ಹಾಗೂ ಗ್ರೇಡ್ ಬಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ರಿಸರ್ವ್ ಬ್ಯಾಂಕ್
ಒಟ್ಟು ಹುದ್ದೆಗಳ ಸಂಖ್ಯೆ: 21
ಹುದ್ದೆ ಹೆಸರು: ಗ್ರೇಡ್ ಎ, ಗ್ರೇಡ್ ಬಿ
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 26
ಮ್ಯಾನೇಜರ್, ಅಸಿಸ್ಟಂಟ್ ಮ್ಯಾನೇಜರ್, ಲೀಗಲ್ ಆಫೀಸರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಎಲ್ ಎಲ್ ಬಿ, ಬಿಇ ಕೋರ್ಸ್ ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಕನಿಷ್ಠ 21ರಿಂದ 40 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಹಾಗೂ ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ವಿಶೇಷ ಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 1.53 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಆನ್ ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಉದ್ಯೋಗಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳು https://rbi.org.in/ಗೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು. ಅರ್ಜಿಯ ಜತೆಗೆ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು. ಮಾರ್ಚ್ 14ರಂದು ಆನ್ ಲೈನ್ ಪರೀಕ್ಷೆ ನಡೆಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : ಮಹಾರಾಷ್ಟ್ರದಲ್ಲಿ ಮಹೀಂದ್ರಾ ಮೆಗಾ ಹೂಡಿಕೆ | ನಾಗ್ಪುರದಲ್ಲಿ 15,000 ಕೋಟಿ ರೂ. ವೆಚ್ಚದ ಅತಿದೊಡ್ಡ ವಾಹನ ತಯಾರಿಕಾ ಘಟಕ ಸ್ಥಾಪನೆ!



















