ಬೆಂಗಳೂರು : ಮಂಡಿನೋವಿನಿಂದ ಬಳಲುತ್ತಿರುವ ಸಿಎಂ ಸಿದ್ಧರಾಮಯ್ಯ(CM Siddaramaiah), ಇನ್ನೆರಡು ದಿನಗಳ ಕಾಲ ವಿಶ್ರಾಂತಿಗೆ ಜಾರಲಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯ(Manipal Hospital) ವೈದ್ಯರ ಸಲಹೆ ಸೂಚನೆ ಮೇರೆಗೆ ಸಿಎಂ ಸಿದ್ಧರಾಮಯ್ಯ, ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ಎರಡು ದಿನಗಳ ಕಾಲ ಮುಂದೂಡಿದ್ದು, ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಪಡೆಯುತ್ತಿದ್ದಾರೆ.
ಎಡಗಾಲಿನ ಮಂಡಿನೋವಿನಿಂದ ಬಳಲುತ್ತಿರುವ ಸಿಎಂ ಸಿದ್ಧರಾಮಯ್ಯ, ನಿನ್ನೆ ನಗರದ ಮಣಿಪಾಲ್ ಆಸ್ಪತ್ರೆಗೆ ತೆರಳಿ ವೈದ್ಯರ ಬಳಿ ಪರೀಕ್ಷೆಗೆ ಒಳಪಟ್ಟರು. ಈ ಸಂದರ್ಭದಲ್ಲಿ ಎರಡು ಘಂಟೆಗಳ ಕಾಲ ವೈದ್ಯರು ಪರೀಕ್ಷೆಗೆ ಒಳಪಡಿಸಿ, ಎಕ್ಸ್ ರೇ ಮಾಡಿಸಿದ್ದು ಸಿಎಂ ಸಿದ್ಧರಾಮಯ್ಯರಿಗೆ ವಿಶ್ರಾಂತಿಯ(rest) ಅಗತ್ಯವಿದೆ ಎಂಬುವುದನ್ನು ತಿಳಿಸಿದರು.
ಈ ಹಿನ್ನೆಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಸಿಎಂ ಸಿದ್ಧರಾಮಯ್ಯ, ಮನೆಯಲ್ಲಿಯೇ ವಿಶ್ರಾಂತಿ ಪಡೆಯಲಿದ್ದು, ಎಲ್ಲಾ ನಿಗದಿತ ಕಾರ್ಯಕ್ರಮಗಳನ್ನು ಮೊಟಕುಗೊಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.