ಹಾಸನ: ಸಂತ್ರಸ್ತೆಯ ಕಿಡ್ನಾಪ್ ಪ್ರಕರಣದಲ್ಲಿ ಬಂಧಿಯಾಗಿ ಜೈಲು ಸೇರಿ ಹೊರ ಬಂದಿದ್ದ ಮಾಜಿ ಸಚಿವ ರೇವಣ್ಣಗೆ ಜಾಮೀನು ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.
ರೇವಣ್ಣ ಅವರಿಗೆ ಜಾಮೀನು ಮಂಜೂರು ಮಾಹಿತಿ ಸಿಗುತ್ತಿದ್ದಂತೆ ಹಾಸನ, ಹೊಳೆನರಸೀಪುರದಲ್ಲಿ ಸಂಭ್ರಮ ಮನೆ ಮಾಡಿತ್ತು. ರಸ್ತೆಗಿಳಿದ ರೇವಣ್ಣ ಅಭಿಮಾನಿಗಳು ಹಾಗೂ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಕೋರ್ಟ್ ನಲ್ಲಿ ನಿನ್ನೆ ಇಡೀ ದಿನ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಡೆಯಿತು.
ನಂತರ ಕೋರ್ಟ್ ಜಾಮೀನು ಮಂಜೂರು ಮಾಡಿತು. ಈ ವಿಷಯ ಹೊರ ಬೀಳುತ್ತಿದ್ದಂತೆ ಅಬಿಮಾನಿಗಳು ಹೊಳೆನರಸೀಪುರದ ಮಹಾತ್ಮಾಗಾಂಧಿ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಮಹಾತ್ಮಾಗಾಂಧಿ ವೃತ್ತಕ್ಕೆ ಆಗಮಿಸಿದ ಪೊಲೀಸರು ಪಟಾಕಿ ಸಿಡಿಸಿದ ಓರ್ವನನ್ನು ವಶಕ್ಕೆ ಪಡೆದರು. ಈ ವೇಳೆ ಕಾರ್ಯಕರ್ತರು ಹಾಗೂ ಪೊಲೀಸರ ಮಧ್ಯೆ ವಾಗ್ವಾದ ನಡೆಯಿತು.