ಬೆಂಗಳೂರು : ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಗೆ ಬಲಿಯಾಗಿರುವ ಭರತ್ ಭೂಷಣ್ ಮನೆಗೆ ರೆವೆನ್ಯೂ ಇನ್ಸ್‌ಪೆಕ್ಟರ್ ಪ್ರದೀಪ್ ನೇತೃತ್ವದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಮೃತ ಭರತ್ ಭೂಷಣ್ ಪತ್ನಿಯಿಂದ ಮಾಹಿತಿ ಪಡೆದಿದ್ದಾರೆ.
ಸರ್ಕಾರದಿಂದ 10 ಲಕ್ಷ ಪರಿಹಾರ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಕುಟುಂಬಸ್ಥರ ಮಾಹಿತಿ ಕಲೆ ಹಾಕಿದ್ದಾರೆ. ಅಕೌಂಟ್ ಡಿಟೈಲ್ಸ್, ಆಧಾರ್ ಕಾರ್ಡ್, ಪಾನ್ ಕಾರ್ಡ್, ಡೆತ್ ಸರ್ಟಿಫಿಕೇಟ್, ಹೀಗೆ ಹಲವಾರು ಮಾಹಿತಿ ಹಾಗೂ ದಾಖಲಾತಿಗಳನ್ನು ಸಂಗ್ರಹಿಸಿದ್ದಾರೆ. ಈ ಎಲ್ಲಾ ದಾಖಲಾತಿಗಳನ್ನು ಸರ್ಕಾರಕ್ಕೆ ಸಲ್ಲಿಸಿದ ನಂತರ ಸರ್ಕಾರದಿಂದ 10 ಲಕ್ಷ ಪರಿಹಾರದ ಹಣ ಬಿಡುಗಡೆಯಾಗುವ ಸಾಧ್ಯತೆ ಇದೆ.



















