ಬೆಂಗಳೂರು : ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನೆಯಲ್ಲಿ ನಾಯಕರು ಊಟಕ್ಕೆ ಸೇರಿರುವ ವಿಚಾರ ಊಹಾಪೋಹಗಳಿಗೆ ದಾರಿ ಮಾಡಿಕೊಟ್ಟಿದೆ. ಈ ಮಧ್ಯೆ ಈ ವಿಷಯವಾಗಿ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ.
ನಿವಾಸದಲ್ಲಿ ಆಯೋಜಿಸಿದ್ದ ಔತಣಕೂಟದಲ್ಲಿ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್ ಸೇರಿದಂತೆ ಹಲವಾರು ನಾಯಕರು ಭಾಗಿಯಾಗಿದ್ದರು. ಡಿಸಿಎಂ ಡಿಕೆ ಶಿವಕುಮಾರ್ ವಿದೇಶ ಪ್ರವಾಸದಲ್ಲಿದ್ದ ಸಂದರ್ಭದಲ್ಲಿ ಈ ಸಭೆ ನಡೆದಿತ್ತು. ಹೀಗಾಗಿ ಈ ವಿಷಯವನ್ನು ರಾಜಕೀಯಗೊಳಿಸಲಾಗಿತ್ತು. ಹಲವರು ಹಲವು ರೀತಿಯಲ್ಲಿ ಮಾತನಾಡಿಕೊಳ್ಳುತ್ತಿದ್ದರು. ಆದರೆ, ಸದ್ಯ ವಿಷಯಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ.
ಊಟದ ಕಾರ್ಯಕ್ರಮ ಅದು, ರಹಸ್ಯ ಮೀಟಿಂಗ್ ಅಲ್ಲ. ಸಂಪುಟ ಪುನಾರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸೇರಿದಂತೆ ಯಾವ ಪ್ರಮುಖ ವಿಚಾರಗಳ ಬಗ್ಗೆಯೂ ಚರ್ಚೆ ನಡೆದಿಲ್ಲ. ಸಭೆಯಲ್ಲಿ ಭಾಗವಹಿಸಿದ ಎಲ್ಲರೂ ಊಟಕ್ಕೆ ಸೇರಿದ್ದರು. ಊಟದ ಕಾರ್ಯಕ್ರಮವನ್ನು ರಾಜಕೀಯಗೊಳಿಸಬಾರದು ಎಂದಿದ್ದಾರೆ.
‘‘ಡಿನ್ನರ್ ಮೀಟಿಂಗ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ವಿಚಾರ ಚರ್ಚೆಯಾಗಿಲ್ಲ. ಒಬ್ಬರಿಗೆ ಒಂದೇ ಹುದ್ದೆ ಎಂಬ ನಿಯಮವಿದೆ ಎಂದಿದ್ದಾರೆ.
ವರಿಷ್ಠರ ಸಮ್ಮುಖದಲ್ಲಿ 2 ವರ್ಷ, 3 ವರ್ಷ ಅಥವಾ ಎರಡೂವರೆ ಎಂಬಂತಹ ಯಾವ ಪವರ್ ಶೇರಿಂಗ್ ಒಪ್ಪಂದ ಆಗಿಲ್ಲ ಎಂದು ಸಿಎಂ ಬದಲಾವಣೆಯ ಊಹಾಪೋಹಕ್ಕೂ ತೆರೆ ಎಳೆದಿದ್ದಾರೆ.