ಬೆಂಗಳೂರು: ನೀವೇನಾದರೂ ಬೆಂಗಳೂರಿನಲ್ಲೇ ಸರ್ಕಾರಿ ಉದ್ಯೋಗ ಹುಡುಕುತ್ತಿದ್ದೀರಾ? ಅದರಲ್ಲೂ, ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ಕೇಂದ್ರ ಸರ್ಕಾರದ ರಾಜೀವ್ ಗಾಂಧಿ ಇನ್ ಸ್ಟಿಟ್ಯೂಟ್ ಆಫ್ ಪೆಟ್ರೋಲಿಯಂ ಟೆಕ್ನಾಲಜಿ ಸಂಸ್ಥೆಯಲ್ಲಿ (RGIPT Recruitment 2025) ಖಾಲಿ ಇರುವ 7 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರಾಜೀವ್ ಗಾಂಧಿ ಇನ್ ಸ್ಟಿಟ್ಯೂಟ್ ಆಫ್ ಪೆಟ್ರೋಲಿಯಂ ಟೆಕ್ನಾಲಜಿ
ಒಟ್ಟು ಹುದ್ದೆಗಳು: 07
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಹುದ್ದೆಗಳ ಹೆಸರು: ಅಸಿಸ್ಟಂಟ್ ಪ್ರೊಫೆಸರ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಅಕ್ಟೋಬರ್ 12
ಕರ್ನಾಟಕದ ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಒಳ್ಳೆಯ ಅವಕಾಶವಾಗಿದೆ. ದೇಶದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಾನ್ಯತೆ ಪಡೆದ ಮಂಡಳಿಗಳಿಂದ ಬಿ.ಇ, ಬಿ.ಟೆಕ್, ಪಿಎಚ್.ಡಿ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಗರಿಷ್ಠ 32 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 80 ಸಾವಿರ ರೂಪಾಯಿಯಿಂದ 1.5 ಲಕ್ಷ ರೂ.ವರೆಗೆ ಸಂಬಳ ನೀಡಲಾಗುತ್ತಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ನಂತರ ಮೆರಿಟ್ ಲಿಸ್ಟ್ ಪ್ರಕಟಿಸಿ, ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ. ಸಂದರ್ಶನದ ಮೂಲಕವೇ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು rgipt.ac.in ವೆಬ್ ಸೈಟ್ ಗೆ ಭೇಟಿ ನೀಡಬಹುದು.