ಬೆಂಗಳೂರು: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಹಾಗೂ ತರಬೇತಿ ಸಮಿತಿಯ (NCERT) ಅಂಗಸಂಸ್ಥೆಯಾಗಿರುವ, ಮೈಸೂರಿನಲ್ಲೇ ಇರುವ ಪ್ರಾದೇಶಿಕ ಶಿಕ್ಷಣ ಸಂಸ್ಥೆಯಲ್ಲಿ ಖಾಲಿ ಇರುವ 15 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಕ್ಷೇತ್ರ ತನಿಖಾಧಿಕಾರಿಗಳ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಈ ಕೆಳಗಿನಂತಿದೆ.
ಹುದ್ದೆಗಳ ಸಂಕ್ಷಿಪ್ತ ಮಾಹಿತಿ
ನೇಮಕಾತಿ ಸಂಸ್ಥೆ: ಪ್ರಾದೇಶಿಕ ಶಿಕ್ಷಣ ಸಂಸ್ಥೆ (MRPL)
ಒಟ್ಟು ಹುದ್ದೆಗಳು: 15
ಹುದ್ದೆಗಳ ಹೆಸರು: ಕ್ಷೇತ್ರ ತನಿಖಾಧಿಕಾರಿ
ನೇಮಕಾತಿ ವಿಧಾನ: ಸಂದರ್ಶನ
ನೇರ ಸಂದರ್ಶನದ ದಿನಾಂಕ: ನವೆಂಬರ್ 20
ಸಂದರ್ಶನಕ್ಕೆ ಹಾಜರಾಗಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಪಿಯುಸಿ, ಡಿಪ್ಲೋಮಾ, ಪದವಿ, ಎಂಬಿಬಿಎಸ್, ಬಿ.ಎಡ್ ಕೋರ್ಸ್ ಗಳನ್ನು ಮುಗಿಸಿದರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 22 ಸಾವಿರ ರೂ.ನಿಂದ 55 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.
ನೇಮಕಾತಿಯು ಸಂಪೂರ್ಣವಾಗಿ ಗುತ್ತಿಗೆ ಆಧಾರಿತವಾಗಿದ್ದು, ಹುದ್ದೆಗಳ ಅವಧಿ ಒಂದು ವರ್ಷ ಅಥವಾ ಯೋಜನೆ ಮುಕ್ತಾಯದವರೆಗೆ ಇರಲಿದೆ. ಸಂದರ್ಶನವು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು https://riemysore.ac.in/ ಗೆ ಭೇಟಿ ನೀಡಿ, ಅಧಿಸೂಚನೆಯನ್ನು ಓದಬೇಕು. ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸದಲ್ಲಿ ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಸಂದರ್ಶನದ ಸ್ಥಳ
Conference Room of the Institute, RIE Mysore.
ಇದನ್ನೂ ಓದಿ: ಮಂಗಳೂರಿನ MRPL ಸಂಸ್ಥೆಯಲ್ಲಿ ಹಲವು ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ



















