ನಟ ವಿಜಯ್ ರಾಘವೇಂದ್ರ ಅವರ ಮುಂದಿನ ಚಿತ್ರ ರಿಪ್ಪನ್ ಸ್ವಾಮಿ ಈಗಾಗಲೇ ಕುತೂಹಲ ಕೆರಳಿಸಿದ್ದು, ಆಗಸ್ಟ್ ತಿಂಗಳ ಅಂತ್ಯಕ್ಕೆ ಬಿಡುಗಡೆಗೆ ಸಿದ್ಧವಾಗಿದೆ.
ಮಾಲ್ಗುಡಿ ಡೇಸ್ ಖ್ಯಾತಿಯ ಕಿಶೋರ್ ಮೂಡುಬಿದ್ರಿ ನಿರ್ದೇಶನದ ರಿಪ್ಪನ್ ಸ್ವಾಮಿ ಆಗಸ್ಟ್ 29 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಗೆ ಬರಲಿದೆ. ಚಿತ್ರದ ಟೀಸರ್ ಮತ್ತು ಟ್ರೇಲರ್ ಶೀಘ್ರದಲ್ಲೇ ಬಿಡುಗಡೆಯಾಗುವ ನಿರೀಕ್ಷೆಯಿದೆ.
ರಿಪ್ಪನ್ ಸ್ವಾಮಿ ಚಿತ್ರದಲ್ಲಿ ವಿಜಯ್ ರಗಡ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದು, ಈವರೆಗೂ ಮಾಡಿರದ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪೋಸ್ಟರ್‌ಗಳ ಮೂಲಕ ಚಿತ್ರ ಸಿನಿಪ್ರಿಯರ ಗಮನ ಸೆಳೆದಿದೆ. ಭಾವನಾತ್ಮಕ ಆಳ ಮತ್ತು ದೈಹಿಕ ತೀವ್ರತೆ ಎರಡನ್ನೂ ಬೇಡುವ ಕಥಾಹಂದರ ಮತ್ತು ಪಾತ್ರದೊಂದಿಗೆ ಇದು ಅವರ ವೃತ್ತಿಜೀವನದ ಅತ್ಯಂತ ಸವಾಲಿನ ಪಾತ್ರಗಳಲ್ಲಿ ಒಂದಾಗಿದೆ


















