ಭೀಮಾನದಿಯಲ್ಲಿ ನೀರಿನ ಪ್ರಮಾಣ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಹಾಗೂ ಮಹಾರಾಷ್ಟ್ರದ ಸಮಾನಾಂತರದಲ್ಲಿರುವ 8 ಬಾಂದಾರ್ ಕಂ ಬ್ಯಾರೇಜ್ ಗಳು ಮುಳುಗಡೆಯಾಗಿದ್ದು, ಹಲವೆಡೆ ಪ್ರವಾಹದ ಆತಂಕ ಮನೆ ಮಾಡಿದೆ.
ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ಕರ್ನಾಟಕದ ಗೋವಿಂದಪುರ-ಭಂಡಾರಕವಟೆ, ಉಮರಾಣಿ-ಲವಗಿ, ಚಣೆಗಾಂವ-ಬರೂರ, ಹಿಂಗಣಿ-ಆಳಗಿ ಬ್ಯಾರೇಜ್ ಗಳು ಜಲಾವೃತಗೊಂಡಿವೆ. ಅಲ್ಲದೇ, ಮಹಾರಾಷ್ಟ್ರದ ಹಿಳ್ಳಿ-ಗುಬ್ಬೇವಾಡ, ಔಜ-ಶಿರನಾಳ, ಚಿಂಚಪೂರ-ಧೂಳಖೇಡ, ಖಾನಾಪುರ-ಪಡನೂರ ಬ್ಯಾರೇಜ್ಗಳು ಜಲಾವೃತಗೊಂಡಿವೆ.
ಬ್ಯಾರೇಜ್ ಗಳ ಮೇಲೆ ಎರಡು ಅಡಿಗಿಂತ ಹೆಚ್ಚು ಪ್ರಮಾಣದಲ್ಲಿ ನೀರು ರಭಸವಾಗಿ ನುಗ್ಗುತ್ತಿದೆ. ಹೀಗಾಗಿ ಮಹಾರಾಷ್ಟ್ರ ಹಾಗೂ ಕರ್ನಾಟಕದ ಕೆಲವು ಗ್ರಾಮಗಳ ಸಂಪರ್ಕ ಬಂದ್ ಆಗಿದೆ. ರೈತರ ಭೂಮಿ ಸಂಪೂರ್ಣವಾಗಿ ನೀರಿನಿಂದ ಆವೃತವಾಗಿವೆ. ರೈತರ ಪಂಪಸೆಟ್ ಗಳು ಕೊಚ್ಚಿ ಹೋಗಿವೆ. ಕೆಲವು ಗ್ರಾಮಗಳಿಗೂ ನೀರು ನುಗ್ಗಿ ಪ್ರವಾಹ ಉಂಟಾಗುವ ಸಾದ್ಯತೆ ಇದೆ. ಹೀಗಾಗಿ ಜನರು ಸುರಕ್ಷಿತವಾಗಿರಬೇಕೆಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.