ಬೈಂದೂರು : ದೇಶವೇ ಬೆರಗುಗಣ್ಣಿನಿಂದ ನೋಡುತ್ತಿರುವ ‘ಕಾಂತಾರ-ಚಾಪ್ಟರ್ 1’ ಸಿನಿಮಾ ಅಕ್ಟೋಬರ್ 2ರಂದು 7000ಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ತೆರೆ ಕಾಣಲಿದೆ. ಜೊತೆಗೆ 30 ದೇಶಗಳಲ್ಲಿ ಏಕಕಾಲಕ್ಕೆ ತೆರೆ ಕಾಣಲಿದೆ.
ಸಿನೆಮಾ ರಿಲೀಸ್ ಗಾಗಿ ಅಂತಿಮ ಹಂತದ ತಯಾರಿಯಲ್ಲಿರುವ ನಿರ್ದೇಶಕ ರಿಷಬ್ ಶೆಟ್ಟಿ ಇಂದು(ಮಂಗಳವಾರ) ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಪತ್ನಿ ಪ್ರಗತಿ ಶೆಟ್ಟಿ ಅವರೊಂದಿಗೆ ಭೇಟಿ ನೀಡಿ, ತಾಯಿ ಮೂಕಾಂಬಿಕೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಿನೆಮಾ ಯಶಸ್ಸಿಗಾಗಿ ಪ್ರಾರ್ಥಿಸಿದ್ದಾರೆ.
ನವರಾತ್ರಿಯ ಶುಭ ಆರಂಭದಲ್ಲೇ ರಿಷಭ್ ಶೆಟ್ಟಿ ಅಭಿನಯದ ಬಹು ನಿರೀಕ್ಷಿತ ಕಾಂತಾರ: ಚಾಪ್ಟರ್ 1 ಟ್ರೈಲರ್ ರಿಲೀಸ್ ಆಗಿದೆ. ಟ್ರೈಲರ್ ಸಿನಿ ಪ್ರಿಯರ ಕುತೂಹಲವನ್ನು ಕೆರಳಿಸಿದೆ.



















