ಮಂಗಳೂರು: ಕಾಂತಾರ ಚಾಪ್ಟರ್ 1ಚಿತ್ರದ ಭರ್ಜರಿ ಯಶಸ್ಸಿನ ಬೆನ್ನಲ್ಲೇ , ನಟ–ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ಚಿತ್ರತಂಡ ಮಂಗಳೂರಿನ ಬಾರೆಬೈಲು ವರಾಹ ಪಂಜುರ್ಲಿ, ಜಾರಂದಾಯ ಮತ್ತು ಬಂಟ ದೈವಸ್ಥಾನದಲ್ಲಿ ಇಂದು ಹರಕೆ ನೇಮೋತ್ಸವಕ್ಕೆ ಆಗಮಿಸಿದ್ದಾರೆ. ಕಾಂತಾರ ಚಿತ್ರ ಯಶಸ್ಸಿನ ಬಳಿಕ , ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲ್ಮ್ಸ್ ಚಿತ್ರತಂಡ ದೈವಕ್ಕೆ ಕಟ್ಟಿಕೊಂಡಿದ್ದ ಹರಕೆಯನ್ನು ಈಡೇರಿಸುವ ಉದ್ದೇಶದಿಂದ ಮಂಗಳೂರು ಭೇಟಿ ನೀಡಿದ್ದಾರೆ.
ವಾರಾಹಿ ಪಂಜುರ್ಲಿ ದೈವದ ನೇಮದಲ್ಲಿ ಚಿತ್ರತಂಡ ಭಾಗಿಯಾಗಿದೆ. ರಿಷಬ್ ಶೆಟ್ಟಿ ಅವರು ಪತ್ನಿ ಹಾಗೂ ಮಕ್ಕಳ ಜೊತೆ ನೇಮೋತ್ಸವಕ್ಕೆ ಆಗಮಿಸಿದ್ದಾರೆ. ನಿರ್ಮಾಪಕ ವಿಜಯ್ ಕಿರಗಂದೂರು, ನಿರ್ದೇಶಕ ಸಂತೋಷ್ ಆನಂದ್ ರಾಮ್ ಸೇರಿದಂತೆ ಚಿತ್ರರಂಗದ ಹಲವರು ಇದರಲ್ಲಿ ಭಾಗಿ ಆಗಿದ್ದಾರೆ. ಗಗ್ಗರ ಸೇವೆ ಜೊತೆಗೆ ಅನ್ನಸಂತರ್ಪಣೆ ಕಾರ್ಯದಲ್ಲಿ ಕೂಡ ‘ಕಾಂತಾರ: ಚಾಪ್ಟರ್ 1’ ಚಿತ್ರತಂಡ ಭಾಗಿಯಾಗಿದೆ.
ಕಳೆದ ಎಪ್ರಿಲ್ ನಲ್ಲಿ ಇದೇ ದೈವಸ್ಥಾನದ ನೇಮೋತ್ಸವದಲ್ಲಿ ಭಾಗಿಯಾಗಿದ್ದ ರಿಷಬ್ ಶೆಟ್ಟಿ ಹಾಗೂ ಕುಟುಂಬಕ್ಕೆ ದೈವ ಅಭಯ ನೀಡಿತ್ತು. ಕಳೆದ ವರ್ಷ ಮಗನ ಹುಟ್ಟುಹಬ್ಬದ ದಿನ ಬಾರೆಬೈಲು ದೇವಸ್ಥಾನಕ್ಕೆ ರಿಷಬ್ ಶೆಟ್ಟಿ ಕುಟುಂಬ ಆಗಮಿಸಿದ್ದರು. ಇಂದು ಅದೇ ದೇವಸ್ಥಾನದಲ್ಲಿ ಹರಕೆ ನೇಮೋತ್ಸವ ಸಲ್ಲಿಸಲಿರೋ ರಿಷಬ್ ಶೆಟ್ಟಿ ಹಾಗೂ ಚಿತ್ರತಂಡ ಬಂದಿದ್ದಾರೆ.
ರಿಷಬ್‌ಗೆ ದೈವದ ಎಚ್ಚರಿಕೆ!
ಕಾಂತಾರ ಸಿನಿಮಾ ಸಮಯದಲ್ಲಿಯೂ ರಿಷಬ್ ಶೆಟ್ಟಿಗೆ ಜಾಗರೂಕತೆಯಿಂದ ಇರುವಂತೆ ದೈವ ಎಚ್ಚರಿಕೆ ನೀಡಿತ್ತು. ಎಲ್ಲಾ ಕಡೆಗಳಲ್ಲಿಯೂ ದುಷ್ಮನ್ಗಳು ಇರುತ್ತಾರೆ, ಎಚ್ಚರಿಕೆ ಇರಲಿ ಎಂಬ ಸೂಚನೆ ಕೊಟ್ಟಿತ್ತು. ಹರಕೆ ಬಾಕಿ ಇದ್ದರೆ ಅದನ್ನು ಮೊದಲು ತೀರಿಸುವಂತೆ ರಿಷಬ್ ಶೆಟ್ಟಿಗೆ ದೈವ ಸೂಚಿಸಿತ್ತು. ಹೀಗಾಗಿ ರಿಷಬ್ ಶೆಟ್ಟಿ ಹಾಗೂ ಚಿತ್ರ ತಂಡ ಹರಕೆ ಸಲ್ಲಿಸಿದ್ದಾರೆ.
ಇದನ್ನೂ ಓದಿ : ಸರಿಯಾಗಿ ನಿರ್ಧಾರ ತೆಗೆದುಕೊಳ್ಳಲು ಬರಲ್ಲ | ರಕ್ಷಿತಾ ವಿರುದ್ಧ ತಿರುಗಿಬಿದ್ದ ಮನೆಮಂದಿ



















