ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ ಭಾರತೀಯ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ರಿಷಭ್ ಪಂತ್ ಭರ್ಜರಿ ಶತಕ ಸಡಿಸಿದ್ದಾರೆ. ಈ ಮೂಲಕ ದಾಖಲೆಯೊಂದನ್ನು ಬರೆದಿದ್ದಾರೆ.
ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಸ್ಪೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದ ದ್ವಿತೀಯ ಇನಿಂಗ್ಸ್ ನಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ರಿಷಭ್ ಪಂತ್ 123 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಶತಕದೊಂದಿಗೆ ಭಾರತ ತಂಡದ ಪರ ಟೆಸ್ಟ್ ನಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ವಿಕೆಟ್ ಕೀಪರ್ ಗಳ ಪಟ್ಟಿಯಲ್ಲಿ ರಿಷಭ್ ಪಂತ್ ಅಗ್ರಸ್ಥಾನಕ್ಕೇರಿದ್ದಾರೆ.
ಇದಕ್ಕೂ ಮುಂಚೆ ಈ ದಾಖಲೆ ಮಹೇಂದ್ರ ಸಿಂಗ್ ಧೋನಿ ಹೆಸರಿನಲ್ಲಿತ್ತು. 144 ಟೆಸ್ಟ್ ಇನಿಂಗ್ಸ್ ಆಡಿರುವ ಧೋನಿ ಕೇವಲ 6 ಶತಕಗಳನ್ನು ಸಿಡಿಸಿ ದಾಖಲೆ ನಿರ್ಮಿಸಿದ್ದರು. ಆದರೆ, ಸದ್ಯ ರಿಷಭ್ ಪಂತ್ ಈ ದಾಖಲೆಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡಿದ್ದಾರೆ. ರಿಷಭ್ ಕೂಡ 6 ಶತಕ ಸಿಡಿಸಿದ್ದಾರೆ.
ರಿಷಭ್ ಪಂತ್ ಕೇವಲ 58 ಇನಿಂಗ್ಸ್ ಗಳಲ್ಲಿ ಒಟ್ಟು 6 ಟೆಸ್ಟ್ ಶತಕಗಳನ್ನು ಬಾರಿಸಿದ್ದಾರೆ. ಅತೀ ಕಡಿಮೆ ಇನಿಂಗ್ಸ್ ಗಳಲ್ಲಿ ಭಾರತದ ಪರ ಅತ್ಯಧಿಕ ಟೆಸ್ಟ್ ಶತಕ ಸಿಡಿಸಿದ ವಿಕೆಟ್ ಕೀಪರ್ ಬ್ಯಾಟರ್ ಎನಿಸಿಕೊಂಡಿದ್ದಾರೆ.