ರಾಯಚೂರು : ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರಿಂದು ಕುಟುಂಬ ಸಮೇತರಾಗಿ ಮಂತ್ರಾಲಯಕ್ಕೆ ಭೇಟಿ ನೀಡಿ, ರಾಯರ ದರ್ಶನ ಪಡೆದಿದ್ದಾರೆ.

ರಾಯಚೂರಿನ ಮಂತ್ರಾಲಯಕ್ಕೆ ಆಗಮಿಸಿ, ಗುರು ರಾಘವೇಂದ್ರ ಸ್ವಾಮಿಯ ದರ್ಶನ ಪಡೆದ ರಿಷಬ್ ಶೆಟ್ಟಿ, ಪತ್ನಿ ಪ್ರಗತಿ ಹಾಗೂ ತಮ್ಮ ಇಬ್ಬರು ಮಕ್ಕಳೊಂದಿಗೆ ರಾಯರ ವೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಬಳಿಕ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿಯವರಿಂದ ಆಶೀರ್ವಚನ ಪಡೆದುಕೊಂಡಿದ್ದಾರೆ. ರಿಷಬ್ ಶೆಟ್ಟಿ ದಂಪತಿಗೆ ಫಲ ಮಂತ್ರಾಕ್ಷತೆ ನೀಡಿ, ಶ್ರೀಗಳು ಆಶೀರ್ವದಿಸಿದ್ದಾರೆ.

ಇದನ್ನೂ ಓದಿ : ಸ್ಟಾರ್ ವಾರ್ ಗದ್ದಲ | 15 ಇನ್‌ಸ್ಟಾ ಖಾತೆ, 150ಕ್ಕೂ ಹೆಚ್ಚು ಕೆಟ್ಟ ಕಮೆಂಟ್ಸ್.. ಸಿಸಿಬಿಗೆ ದೂರು ಕೊಟ್ಟ ವಿಜಯಲಕ್ಷ್ಮಿ



















