ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸು, ನವರತ್ನ ಕಂಪನಿಗಳಲ್ಲಿ ಒಂದಾಗಿರುವವ ರೈಲ್ ಇಂಡಿಯಾ ಟೆಕ್ನಿಕಲ್ ಆ್ಯಂಡ್ ಎಕನಾಮಿಕ್ ಸರ್ವಿಸಸ್ ಸಂಸ್ಥೆಯಲ್ಲಿ (RITES Recruitment 2025) ಖಾಲಿ ಇರುವ 400 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರೈಲ್ ಇಂಡಿಯಾ ಟೆಕ್ನಿಕಲ್ ಆ್ಯಂಡ್ ಎಕನಾಮಿಕ್ ಸರ್ವಿಸಸ್ ಸಂಸ್ಥೆಯಲ್ಲಿ (RITES)
ಒಟ್ಟು ಹುದ್ದೆಗಳು: 400
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಡಿಸೆಂಬರ್ 25
ಉದ್ಯೋಗ ಸ್ಥಳ: ದೇಶಾದ್ಯಂತ
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದು.
ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ಸೇರಿ ಹಲವು ವಿಭಾಗಗಳಲ್ಲಿ ಖಾಲಿ ಇರುವ ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ, ಬಿಇ, ಬಿಟೆಕ್ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರ ಗರಿಷ್ಠ ವಯಸ್ಸು 40 ವರ್ಷ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 300 ರೂಪಾಯಿ ಅರ್ಜಿ ಶುಲ್ಕವಿದ್ದರೆ, ಉಳಿದವರಿಗೆ 600 ರೂಪಾಯಿ ಅರ್ಜಿ ಶುಲ್ಕವಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ, ಇಡಬ್ಲ್ಯೂಎಸ್ ನವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 42 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು rites.com ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಸಾರ್ವಜನಿಕರೇ ಗಮನಿಸಿ, 3 ದಿನದಲ್ಲಿ ಈ ಕೆಲಸ ಮಾಡಿಸದಿದ್ದರೆ ಪಿಂಚಣಿ ಕಡಿತ, ಬ್ಯಾಂಕ್ ಖಾತೆ ಸ್ಥಗಿತ



















