ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ರೈಲ್ ಇಂಡಿಯಾ ಟೆಕ್ನಿಕಲ್ ಆ್ಯಂಡ್ ಎಕನಾಮಿಕ್ ಸರ್ವಿಸಸ್ ಸಂಸ್ಥೆಯಲ್ಲಿ (RITES Recruitment 2025) ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರೋಗ್ರಾಂ ಮ್ಯಾನೇಜರ್ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರೈಲ್ ಇಂಡಿಯಾ ಟೆಕ್ನಿಕಲ್ ಆ್ಯಂಡ್ ಎಕನಾಮಿಕ್ ಸರ್ವಿಸಸ್ ಸಂಸ್ಥೆಯಲ್ಲಿ (RITES)
ಒಟ್ಟು ಹುದ್ದೆಗಳು: 01
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 06
ವಿದ್ಯಾರ್ಹತೆ ಏನು?
ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಕಂಪ್ಯೂಟರ್ ಸೈನ್ಸ್ ನಲ್ಲಿ ಬಿಇ, ಬಿಟೆಕ್ ಕೋರ್ಸ್ ಗಳನ್ನು ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರ ಗರಿಷ್ಠ ವಯಸ್ಸು 50 ವರ್ಷ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವ ಎಲ್ಲ ಸಮುದಾಯದವರಿಗೆ 600 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 90 ಸಾವಿರ ರೂಪಾಯಿಯಿಂದ 2.4 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು rites.com ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಪರಿಶೀಲಿಸಿದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ. ಅಕ್ಟೋಬರ್ 9ರಂದು ಸಂದರ್ಶನ ನಡೆಯಲಿದೆ.



















