ಬೆಂಗಳೂರು: ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳು (RITES) ಸಂಸ್ಥೆಯಲ್ಲಿ ಖಾಲಿ ಇರುವ ವೈಯಕ್ತಿಕ ಸಲಹೆಗಾರರ ಹುದ್ದೆಗೆ ಅಧಿಸೂಚನೆ ಹೊರಡಿಸಲಾಗಿದೆ. ಮೂರು ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಮೇ 18 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ನೇಮಕಾತಿ ಹೊಂದಿದ ಅಭ್ಯರ್ಥಿಗಳಿಗೆ ಮಾಸಿಕ 80 ಸಾವಿರ ರೂಪಾಯಿಯಿಂದ 85 ಸಾವಿರ ರೂಪಾಯಿ ವೇತನ ನೀಡಲಾಗುತ್ತದೆ. ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಪದವಿ ಅಥವಾ ಎಂಎ ಅಥವಾ ಎಂಸ್ಸಿ ಕೋರ್ಸ್ ಮುಗಿಸಿರಬೇಕು. 63 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
- RITES ಅಧಿಕೃತ ವೆಬ್ಸೈಟ್ https://rites.com/ಗೆ ಭೇಟಿ ನೀಡಬೇಕು
- ನೀವು ಅರ್ಜಿ ಸಲ್ಲಿಸಲಿರುವ RITES ನೇಮಕಾತಿ ಅಥವಾ ಉದ್ಯೋಗಗಳಿಗಾಗಿ ಪರಿಶೀಲಿಸಿ.
- ವೈಯಕ್ತಿಕ ಸಲಹೆಗಾರ ಹುದ್ದೆಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
- ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- 18-05-2025 ರೊಳಗೆ ಅರ್ಜಿ ಸಲ್ಲಿಸಿ. ಅರ್ಜಿ ನಮೂನೆಯ ಸಂಖ್ಯೆ/ಕೊರಿಯರ್ ಸ್ವೀಕೃತಿ ಸಂಖ್ಯೆಯನ್ನು ಸುರಕ್ಷಿತವಾಗಿಡಬೇಕು.