ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ದೇಶದ ನವರತ್ನ ಕಂಪನಿಗಳಲ್ಲಿ ಒಂದಾಗಿರುವ ರೈಲ್ ಇಂಡಿಯಾ ಟೆಕ್ನಿಕಲ್ ಆ್ಯಂಡ್ ಎಕನಾಮಿಕ್ ಸರ್ವಿಸಸ್ ಸಂಸ್ಥೆಯಲ್ಲಿ (RITES Recruitment 2026) ಖಾಲಿ ಇರುವ 10 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಡೆಪ್ಯೂಟಿ ಜನರಲ್ ಮ್ಯಾನೇಜರ್ ಸೇರಿ ಹಲವು ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಇಲ್ಲಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರೈಲ್ ಇಂಡಿಯಾ ಟೆಕ್ನಿಕಲ್ ಆ್ಯಂಡ್ ಎಕನಾಮಿಕ್ ಸರ್ವಿಸಸ್ ಸಂಸ್ಥೆ (RITES)
ಒಟ್ಟು ಹುದ್ದೆಗಳು: 6
ಹುದ್ದೆಗಳ ಹೆಸರು: ಡೆಪ್ಯೂಟಿ ಜನರಲ್ ಮ್ಯಾನೇಜರ್
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಏಪ್ರಿಲ್ 12
ಉದ್ಯೋಗ ಸ್ಥಳ: ಬೆಂಗಳೂರು
ಮೂರು ಡೆಪ್ಯೂಟಿ ಜನರಲ್ ಮ್ಯಾನೇಜರ್, ಮೂರು ಗ್ರೂಪ್ ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಸ್ನಾತಕೋತ್ತರ ಪದವಿ ಮುಗಿಸಿದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರ ಗರಿಷ್ಠ ವಯಸ್ಸು 57 ವರ್ಷ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ.
ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಲಾಗುತ್ತದೆ ಎಂಬುದಾಗಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ, ಇಡಬ್ಲ್ಯೂಎಸ್ ನವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು rites.com ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ
ಇದನ್ನೂ ಓದಿ : ಫ್ರೀಡಂ ಪಾರ್ಕ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರೊಟೆಸ್ಟ್!



















