ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ನವರತ್ನ ಕಂಪನಿಗಳಲ್ಲಿ ಒಂದಾಗಿರುವ ರೈಲ್ ಇಂಡಿಯಾ ಟೆಕ್ನಿಕಲ್ ಆ್ಯಂಡ್ ಎಕನಾಮಿಕ್ ಸರ್ವಿಸಸ್ ಸಂಸ್ಥೆಯಲ್ಲಿ (RITES Recruitment 2026) ಖಾಲಿ ಇರುವ 18 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರೈಲ್ ಇಂಡಿಯಾ ಟೆಕ್ನಿಕಲ್ ಆ್ಯಂಡ್ ಎಕನಾಮಿಕ್ ಸರ್ವಿಸಸ್ ಸಂಸ್ಥೆಯಲ್ಲಿ (RITES)
ಒಟ್ಟು ಹುದ್ದೆಗಳು: 18
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜನವರಿ 27
ಉದ್ಯೋಗ ಸ್ಥಳ: ದೇಶಾದ್ಯಂತ
ಸೀನಿಯರ್ ಮ್ಯಾನೇಜರ್, ಮ್ಯಾನೇಜರ್, ಅಸಿಸ್ಟಂಟ್ ಮ್ಯಾನೇಜರ್, ಗ್ರೂಪ್ ಜನರಲ್ ಮ್ಯಾನೇಜರ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದು.
ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ, ಬಿಇ, ಬಿಟೆಕ್, ಎಂಬಿಎ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರ ಗರಿಷ್ಠ ವಯಸ್ಸು 53 ವರ್ಷ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 300 ರೂಪಾಯಿ ಅರ್ಜಿ ಶುಲ್ಕವಿದ್ದರೆ, ಉಳಿದವರಿಗೆ 600 ರೂಪಾಯಿ ಅರ್ಜಿ ಶುಲ್ಕವಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ, ಇಡಬ್ಲ್ಯೂಎಸ್ ನವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 2.8 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು rites.com ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಇದನ್ನೂ ಓದಿ : ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ 24 ಹುದ್ದೆಗಳ ನೇಮಕ | ಫ್ರೆಶರ್‌ಗಳಿಗೆ ಗುಡ್ ನ್ಯೂಸ್



















