ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ದೇಶದ ನವರತ್ನ ಕಂಪನಿಗಳಲ್ಲಿ ಒಂದಾಗಿರುವ ರೈಲ್ ಇಂಡಿಯಾ ಟೆಕ್ನಿಕಲ್ ಆ್ಯಂಡ್ ಎಕನಾಮಿಕ್ ಸರ್ವಿಸಸ್ ಸಂಸ್ಥೆಯಲ್ಲಿ (RITES Recruitment 2026) ಖಾಲಿ ಇರುವ 3 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಸಿಸ್ಟಂಟ್ ಸಿವಿಲ್ ಎಂಜಿನಿಯರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಇಲ್ಲಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರೈಲ್ ಇಂಡಿಯಾ ಟೆಕ್ನಿಕಲ್ ಆ್ಯಂಡ್ ಎಕನಾಮಿಕ್ ಸರ್ವಿಸಸ್ ಸಂಸ್ಥೆ (RITES)
ಒಟ್ಟು ಹುದ್ದೆಗಳು: 3
ಹುದ್ದೆಗಳ ಹೆಸರು: ಅಸಿಸ್ಟಂಟ್ ಸಿವಿಲ್ ಎಂಜಿನಿಯರ್
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮಾರ್ಚ್ 18
ಉದ್ಯೋಗ ಸ್ಥಳ: ಗುಜರಾತ್
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಬಿ.ಇ ಅಥವಾ ಬಿ.ಟೆಕ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರ ಗರಿಷ್ಠ ವಯೋಮಿತಿಯು 55 ವರ್ಷ ಎಂಬುದಾಗಿ ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 50 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಲಿಖಿತ ಪರೀಕ್ಷೆ ಹಾಗೂ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಲಾಗುತ್ತದೆ ಎಂಬುದಾಗಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ, ಇಡಬ್ಲ್ಯೂಎಸ್ ನವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು rites.com ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳಗಳು
Gurugram : RTES Ltd., Shikhar, Plot No. 1, Sector – 29, Near IFFCO Chowk Metro Station, Gurugram – 122001, Haryana
Ahmedabad: RITES LTD, Unit-404,4th Floor, Dwarkesh Business Hub, Visat-Tapovan Road, Motera, Ahmedabad, Gujarat-380005
ಇದನ್ನೂ ಓದಿ : ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕ.. ಕೂಡಲೇ ಅರ್ಜಿ ಸಲ್ಲಿಸಿ



















