ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ದೇಶದ ನವರತ್ನ ಕಂಪನಿಗಳಲ್ಲಿ ಒಂದಾಗಿರುವ ರೈಲ್ ಇಂಡಿಯಾ ಟೆಕ್ನಿಕಲ್ ಆ್ಯಂಡ್ ಎಕನಾಮಿಕ್ ಸರ್ವಿಸಸ್ ಸಂಸ್ಥೆಯಲ್ಲಿ (RITES Recruitment 2026) ಖಾಲಿ ಇರುವ 03 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಂಡಿವಿಷ್ಯುವಲ್ ಕನ್ಸಲ್ಟಂಟ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಈ ಕೆಳಗಿನಂತಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರೈಲ್ ಇಂಡಿಯಾ ಟೆಕ್ನಿಕಲ್ ಆ್ಯಂಡ್ ಎಕನಾಮಿಕ್ ಸರ್ವಿಸಸ್ ಸಂಸ್ಥೆ (RITES)
ಒಟ್ಟು ಹುದ್ದೆಗಳು: 03
ಹುದ್ದೆಗಳ ಹೆಸರು: ಇಂಡಿವಿಷ್ಯುವಲ್ ಕನ್ಸಲ್ಟಂಟ್
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮಾರ್ಚ್ 09
ಉದ್ಯೋಗ ಸ್ಥಳ: ಬೆಂಗಳೂರು
ಬೆಂಗಳೂರಿನಲ್ಲಿಯೇ ಉದ್ಯೋಗ ಹುಡುಕುತ್ತಿರುವವರಿಗೆ ಇದು ಒಳ್ಳೆಯ ಅವಕಾಶವಾಗಿದೆ. ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಡಿಪ್ಲೋಮಾ, ಸಿವಿಲ್ ಎಂಜಿನಿಯರಿಂಗ್ ನಲ್ಲಿ ಪದವಿ, ಎಂಎ, ಎಂಸ್ಸಿ ಸೇರಿ ಯಾವುದೇ ಸ್ನಾತಕೋತ್ತರ ಪದವಿ ಮುಗಿಸಿದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರ ಗರಿಷ್ಠ ವಯಸ್ಸು 63 ವರ್ಷ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ.
ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಲಾಗುತ್ತದೆ ಎಂಬುದಾಗಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ, ಇಡಬ್ಲ್ಯೂಎಸ್ ನವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 80 ಸಾವಿರ ರೂಪಾಯಿಯಿಂದ 3 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು rites.com ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಸಂದರ್ಶನದ ವಿವರ :
ಸ್ಥಳ: RITES Corporate Office, Shikhar, Plot No.01, Sector-29, Gurugram-122001
ದಿನಾಂಕ: ಮಾರ್ಚ್ 10
ಇದನ್ನೂ ಓದಿ : ಶಾಸಕ ಚಂದ್ರು ಲಮಾಣಿ ಬಂಧನ ಖಂಡಿಸಿ ಅಭಿಮಾನಿಗಳ ಪ್ರತಿಭಟನೆ



















