ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ದೇಶದ ನವರತ್ನ ಕಂಪನಿಗಳಲ್ಲಿ ಒಂದಾಗಿರುವ ರೈಲ್ ಇಂಡಿಯಾ ಟೆಕ್ನಿಕಲ್ ಆ್ಯಂಡ್ ಎಕನಾಮಿಕ್ ಸರ್ವಿಸಸ್ ಸಂಸ್ಥೆಯಲ್ಲಿ (RITES Recruitment 2026) ಖಾಲಿ ಇರುವ 31 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 31 ಸೀನಿಯರ್ ಟೆಕ್ನಿಕಲ್ ಅಸಿಸ್ಟಂಟ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರೈಲ್ ಇಂಡಿಯಾ ಟೆಕ್ನಿಕಲ್ ಆ್ಯಂಡ್ ಎಕನಾಮಿಕ್ ಸರ್ವಿಸಸ್ ಸಂಸ್ಥೆ (RITES)
ಒಟ್ಟು ಹುದ್ದೆಗಳು: 31
ಹುದ್ದೆಗಳ ಹೆಸರು: ಸೀನಿಯರ್ ಟೆಕ್ನಿಕಲ್ ಅಸಿಸ್ಟಂಟ್
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 22
ಉದ್ಯೋಗ ಸ್ಥಳ: ಕರ್ನಾಟಕ ಸೇರಿ ದೇಶದ ಹಲವೆಡೆ
ಕರ್ನಾಟಕ, ಕೇರಳ, ಲಕ್ಷದ್ವೀಪ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ಹಾಗೂ ಪುದುಚೇರಿಯಲ್ಲಿ ನೇಮಕಾತಿ ನಡೆಯುತ್ತಿದೆ. ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಡಿಪ್ಲೋಮಾ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರ ಗರಿಷ್ಠ ವಯಸ್ಸು 40 ವರ್ಷ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಎಸ್ಸಿ, ಎಸ್ಟಿ, ವಿಶೇಷ ಚೇತನರಿಗೆ 100 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದವರಿಗೆ 300 ರೂಪಾಯಿ ನಿಗದಿಪಡಿಸಲಾಗಿದೆ. ಲಿಖಿತ ಪರೀಕ್ಷೆ ಹಾಗೂ ದಾಖಲೆ ಪರಿಶೀಲನೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಮೊದಲಿಗೆ rites.com ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳ ನೇಮಕಾತಿಯ ಅಧಿಸೂಚನೆ ಓದಬೇಕು
ಬಳಿಕ ಅರ್ಜಿಯ ನಮೂನೆಯನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದೆ ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.


















