ಬೆಂಗಳೂರು : ಕೇಂದ್ರ ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ ದೊರೆತಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ದೇಶದ ನವರತ್ನ ಕಂಪನಿಗಳಲ್ಲಿ ಒಂದಾಗಿರುವ ರೈಲ್ ಇಂಡಿಯಾ ಟೆಕ್ನಿಕಲ್ ಆ್ಯಂಡ್ ಎಕನಾಮಿಕ್ ಸರ್ವಿಸಸ್ ಸಂಸ್ಥೆಯಲ್ಲಿ (RITES Recruitment 2026) ಖಾಲಿ ಇರುವ 4 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರೈಲ್ ಇಂಡಿಯಾ ಟೆಕ್ನಿಕಲ್ ಆ್ಯಂಡ್ ಎಕನಾಮಿಕ್ ಸರ್ವಿಸಸ್ ಸಂಸ್ಥೆ (RITES)
ಒಟ್ಟು ಹುದ್ದೆಗಳು: 4
ಹುದ್ದೆಗಳ ಹೆಸರು: ಅಸಿಸ್ಟಂಟ್ ಮ್ಯಾನೇಜರ್
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಆಗಸ್ಟ್ 16
ಉದ್ಯೋಗ ಸ್ಥಳ: ಗುರುಗ್ರಾಮ, ಹರಿಯಾಣ
1 ಮ್ಯಾನೇಜರ್ ಹಾಗೂ 3 ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಬಿ.ಇ, ಬಿ.ಟೆಕ್, ಸ್ನಾತಕೋತ್ತರ ಪದವಿ ಮುಗಿಸಿದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರ ಗರಿಷ್ಠ ವಯಸ್ಸು 40 ವರ್ಷ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವ ಎಲ್ಲರಿಗೂ 600 ರೂಪಾಯಿ ಶುಲ್ಕವಿದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 1.6 ಲಕ್ಷ ರೂಪಾಯಿ ಸಂಬಳ ನೀಡಲಾಗುತ್ತದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಲಿಖಿತ ಪರೀಕ್ಷೆ ನಡೆಸಿ ಸಂದರ್ಶನಕ್ಕೆ ಆಹ್ವಾನಿಸುವ ಮೂಲಕ ನೇಮಕಾತಿ ಮಾಡಲಾಗುತ್ತದೆ ಎಂಬುದಾಗಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು rites.com ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಇದನ್ನೂ ಓದಿ : ಕಬಿನಿಯಿಂದ ತಮಿಳುನಾಡಿಗೆ 25 ಸಾವಿರ ಕ್ಯೂಸೆಕ್ ನೀರು ರಿಲೀಸ್!



















