ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ ಸಂಸ್ಥೆಯಾದ ರೈಲ್ ಇಂಡಿಯಾ ಟೆಕ್ನಿಕಲ್ ಆ್ಯಂಡ್ ಎಕನಾಮಿಕ್ ಸರ್ವಿಸ್ (RITES Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 48 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಜೂನಿಯರ್ ಹಾಗೂ ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳ ನೇಮಕಾತಿ ನಡೆಯುತ್ತಿದೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೈಮಕಾತಿ ಸಂಸ್ಥೆ : ರೈಲ್ ಇಂಡಿಯಾ ಟೆಕ್ನಿಕಲ್ ಆ್ಯಂಡ್ ಎಕನಾಮಿಕ್ ಸರ್ವಿಸ್ (RITES)
ಒಟ್ಟು ಹುದ್ದೆ: 48
ಉದ್ಯೋಗ ಸ್ಥಳ: ಗುರುಗ್ರಾಮ-ಹರಿಯಾಣ, ತಿರುವನಂತಪುರಂ-ಕೇರಳ
ನೇಮಕಾತಿ ವಿಧಾನ: ನೇರ ಸಂದರ್ಶನ
ಸಂದರ್ಶನದ ದಿನಾಂಕ: ಫೆಬ್ರವರಿ 27
9 ಟೀಮ್ ಲೀಡರ್, 8 ಪ್ರಾಜೆಕ್ಟ್ ಎಂಜಿನಿಯರ್ ಹಾಗೂ 31 ಜೂನಿಯರ್ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಬಿ.ಇ, ಬಿ.ಟೆಕ್, ಡಿಪ್ಲೋಮಾ ಕೋರ್ಸ್ ಮುಗಿಸಿದವರು ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಸಂದರ್ಶನಕ್ಕೆ ಹಾಜರಾಗುವವರಿಗೆ 55 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 2 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಸಂದರ್ಶನಕ್ಕೆ ಹಾಜರಾಗುವವರಿಗೆ ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ.
ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೊದಲಿಗೆ rites.com ಗೆ ಭೇಟಿ ನೀಡಿ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆಯನ್ನು ಓದಬೇಕು. ಅಧಿಸೂಚನೆಯಲ್ಲಿ ನಮೂದಿಸಿದ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸದಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಸಂದರ್ಶನ ನಡೆಯುವ ಸ್ಥಳಗಳು
Gurugram: RITES Ltd., Shikhar, Plot No. 1, Sector – 29, Near IFFCO Chowk Metro Station, Gurugram – 122001, Haryana
Thiruvananthapuram: RITES LTD, Ground floor, Calsar Heather Punnen Road, Opposite Hilton Hotel, Statue, Thiruvananthapuram- 695001, Kerela
ಸಂದರ್ಶನದ ದಿನಾಂಕಗಳು: ಟೀಮ್ ಲೀಡರ್ ಹಾಗೂ ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳಿಗೆ ಫೆಬ್ರವರಿ 23 ಹಾಗೂ 24ರಂದು ಸಂದರ್ಶನ ನಡೆಯಲಿದೆ. ಜೂನಿಯರ್ ಎಂಜಿನಿಯರ್ ಹುದ್ದೆಗಳಿಗೆ ಫೆಬ್ರವರಿ 25ರಿಂದ 27ರವರೆಗೆ ಸಂದರ್ಶನ ನಡೆಯಲಿದೆ.
ಇದನ್ನೂ ಓದಿ: ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ 2 ಹುದ್ದೆಗಳ ನೇಮಕ | ಕೂಡಲೇ ಅರ್ಜಿ ಸಲ್ಲಿಸಿ



















