ಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ರೈಲ್ ಲ್ಯಾಂಡ್ ಡೆವಲಪ್ ಮೆಂಟ್ ಅಥಾರಿಟಿ (RLDA Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 40 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. 40 ಸೈಟ್ ಎಂಜಿನಿಯರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರೈಲ್ ಲ್ಯಾಂಡ್ ಡೆವಲಪ್ ಮೆಂಟ್ ಅಥಾರಿಟಿ (RLDA)
ಒಟ್ಟು ಹುದ್ದೆಗಳು: 40
ಹುದ್ದೆಗಳ ಹೆಸರು: ಸೈಟ್ ಎಂಜಿನಿಯರ್
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಮೇ 22
ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಬಿ.ಇ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಸಿವಿಲ್ ಅಥವಾ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ನಲ್ಲಿ ಕೋರ್ಸ್ ಮುಗಿಸಿರಬೇಕು. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ 76 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ rlda.indianrailways.gov.in ಗೆ ಭೇಟಿ ನೀಡಬೇಕು. ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಳ್ಳಬೇಕು. ಅರ್ಜಿಯನ್ನು ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳ ಸಾಫ್ಟ್ ಕಾಪಿಗಳನ್ನು site.engg.rlda@gmail.com ಗೆ ಮೇಲ್ ಮಾಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : ಧಗಧಗನೆ ಹೊತ್ತಿ ಉರಿದ ಸಾರಿಗೆ ಬಸ್ – ಚಾಲಕನ ಸಮಯಪ್ರಜ್ಞೆಯಿಂದ 17 ಮಂದಿ ಪಾರು!


















