ವಿಜಯನಗರ : ವಿಜಯನಗರ ಜಿಲ್ಲೆಯ ಹಡಗಲಿ ಪಟ್ಟಣದಲ್ಲಿ ರಸ್ತೆ ಕಾಮಗಾರಿಯು ಅರ್ಧಕ್ಕೆ ನಿಂತಿದ್ದು, ಗುತ್ತಿಗೆದಾರರ, ಜನಪ್ರತಿನಿಧಿಗಳ ವಿರುದ್ಧ ಸ್ಥಳೀಯರು ಆಕ್ರೋಶಗೊಂಡಿದ್ದಾರೆ.
3 ತಿಂಗಳಾದರೂ ರಸ್ತೆ ಕಾಮಗಾರಿ ಪೂರ್ಣಗೊಂಡಿಲ್ಲ. ಇಲ್ಲಿ ಹೇಳೋರು ಕೇಳೋರು ಯಾರು ಇಲ್ಲಅಧಿಕಾರಿಗಳು, ಜನ ಪ್ರತಿನಿಧಿಗಳು ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಸ್ಥಳೀಯರು ಕಿಡಿಕಾರಿದ್ದಾರೆ.
ಸದ್ಯ ವಾಹನ ಸವಾರರು ರಸ್ತೆ ವಿಡಿಯೋ ಮಾಡಿ ಬೇಗನೇ ಸಂಬಂಧ ಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಎಚ್ಚರಿಕೆ ನೀಡಿದ್ದಾರೆ.



















