ಮೈಸೂರು : ಐವರ ಗ್ಯಾಂಗ್ ಮಾರಕಾಸ್ತ್ರ ಹಿಡಿದು ಪೆಟ್ರೋಲ್ ಬಂಕ್‌ಗೆ ನುಗ್ಗಿ ದರೋಡೆ ಮಾಡಿರುವ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ಬಿಳಿಕೆರೆಯ ಸ್ವಾಮಿ ಸರ್ವಿಸ್ ಸ್ಟೇಷನ್‌ನಲ್ಲಿ ನಡೆದಿದೆ.
ಇಬ್ಬರು ಸಿಬ್ಬಂದಿ ಮೇಲೆ ಹಲ್ಲೆ ಮಾಡಿ 15,300 ರೂಪಾಯಿ ದರೋಡೆ ಮಾಡಿದ್ದಾರೆ. ಫೆಬ್ರವರಿ 12ರ ರಾತ್ರಿ ಸುಮಾರು 10:30 ಗಂಟೆ ಸುಮಾರಿಗೆ ಈ ದರೋಡೆ ನಡೆದಿದ್ದು, ದರೋಡೆ ಹಾಗೂ ಹಲ್ಲೆಯ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಬಂದು ಮೊದಲು ಪೆಟ್ರೋಲ್ ಹಾಕಿಸುತ್ತಿದ್ದ ಗ್ಯಾಂಗ್, ನಂತರ ಕಚೇರಿ ಒಳಗೆ ನುಗ್ಗಿ ಸಿಬ್ಬಂದಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಹಣ ಕಸಿದುಕೊಂಡು ಹೋಗಿದ್ದಾರೆ. ಪ್ರಕರಣ ಸಂಬಂಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಇದನ್ನೂ ಓದಿ : ಶಿವರಾತ್ರಿ ಸಂಭ್ರಮಕ್ಕೆ ಮೈಸೂರು ಅರಮನೆ ಸಜ್ಜು | ತ್ರಿನೇಶ್ವರನ ಚಿನ್ನದ ಕೊಳಗ ಕಣ್ತುಂಬಿಕೊಳ್ಳಲು ಭಕ್ತರ ಕಾತರ



















