ಕಾರ್ಮಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ರೋಹಣಿ ಸಿಂಧೂರಿ ಅವರನ್ನು ಉಡುಪಿ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿಯಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.
ರಾಜ್ಯದ ಅಭಿವೃದ್ಧಿ ಯೋಜನೆಗಳ ಜಾರಿ, ಪರಿಶೀಲನೆ ಮತ್ತು ಅದರ ವಿಚಾರಣೆ ನೆಡೆಸಿ ಜಿಲ್ಲಾ ಮಟ್ಟದಲ್ಲಿ ಪರಿಶೀಲಿಸಿ ಸರ್ಕಾರಕ್ಕೆ ವರದಿ ಸಲ್ಲಿಸುವುದು ಇವರ ಜವಾಬ್ದಾರಿಯಾಗಿರುತ್ತದೆ.
ಈ ಹಿಂದೆ ಸತ್ಯವತಿ ಅವರು ಉಡುಪಿ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿಯಾಗಿದ್ದು, ಅವರು ನಿವೃತ್ತಿಯಾಗಿರುವುದರಿಂದ ತೆರವಾದ ಸ್ಥಾನಕ್ಕೆ ರೋಹಿಣಿ ಸಿಂಧೂರಿಯವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.