ದುಬೈ: ಚಾಂಪಿಯನ್ಸ್ ಟ್ರೋಫಿಯಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಟಾಸ್ ಸೋಲುವ ಮೂಲಕ ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮ ಕೆಟ್ಟ ದಾಖಲೆ ತಮ್ಮ ಹೆಸರಿಗೆ ಬರೆಸಿಕೊಂಡಿದ್ದಾರೆ. ಏಕದಿನದಲ್ಲಿ ಸತತವಾಗಿ ಅತಿ ಹೆಚ್ಚು ಟಾಸ್ ಸೋತ ಮೂರನೇ ನಾಯಕ ಎಂಬ ಕುಖ್ಯಾತಿ ಪಡೆದುಕೊಂಡಿದ್ದಾರೆ. ಇದು ನಾಯಕನಾಗಿ ರೋಹಿತ್ ಟಾಸ್ ಸೋತ 10ನೇ ಪಂದ್ಯವಾಗಿದೆ. ವೆಸ್ಟ್ ಇಂಡೀಸ್‌ನ ಮಾಜಿ ನಾಯಕ ಬ್ರಿಯಾನ್ ಲಾರಾ(12) ಮತ್ತು ಪೀಟರ್ ಬೊರೆನ್(11) ಮೊದಲೆರಡು ಸ್ಥಾನದಲ್ಲಿದ್ದಾರೆ.
ಭಾರತ ಈ ಪಂದ್ಯಕ್ಕೆ ಒಂದು ಬದಲಾವಣೆ ಮಾಡಿಕೊಂಡಿದೆ. ಹರ್ಷಿತ್ ರಾಣಾ ಬದಲು ಸ್ಪಿನ್ನರ್ ವರುಣ್ ಚರ್ಕವರ್ತಿ ಅವಕಾಶ ಪಡೆದಿದ್ದಾರೆ. ನ್ಯೂಜಿಲೆಂಡ್ ಕೂಡ ಒಂದು ಬದಲಾವಣೆ ಮಾಡಿತು. ಡ್ಯಾರಿಲ್ ಮಿಚೆಲ್ ಮತ್ತೆ ಈ ಪಂದ್ಯದಲ್ಲಿ ಆಡಲಿಳಿದರು. ಅವರಿಗಾಗಿ ಡೇವೋನ್ ಕಾನ್ವೆ ಸ್ಥಳವಾಕಾಶ ಮಾಡಿಕೊಟ್ಟಿದ್ದಾರೆ. ‘ಎ’ ಗುಂಪಿನಲ್ಲಿರುವ ಭಾರತ ಮತ್ತು ನ್ಯೂಜಿಲ್ಯಾಂಡ್ ಆಡಿರುವ 2 ಪಂದ್ಯಗಳಲ್ಲಿ ಗೆಲುವು ಸಾಧಿಸಿ ತಲಾ 4 ಅಂಕ ಹೊಂದಿದೆ. ಆದರೆ ನೆಟ್ ರನ್ ರೇಟ್ ಆಧಾರದಲ್ಲಿ ನ್ಯೂಜಿಲೆಂಡ್ (+0.863) ಅಗ್ರಸ್ಥಾನದಲ್ಲಿದ್ದರೆ, ಭಾರತ(+0.647) ನಂತರದ ಸ್ಥಾನದಲ್ಲಿದೆ.
ಭಾನುವಾರದ ಮುಖಾಮುಖಿಯಲ್ಲಿ ಗೆಲ್ಲುವ ತಂಡ ಬಿ ಗುಂಪಿನ ದ್ವಿತೀಯ ಸ್ಥಾನಿಯಾಗಿರುವ ಆಸ್ಟ್ರೇಲಿಯಾ ವಿರುದ್ಧ ದ್ವಿತೀಯ ಸೆಮಿ ಪಂದ್ಯದಲ್ಲಿ ಆಡಲಿದೆ. ಭಾರತ ಮತ್ತು ನ್ಯೂಜಿಲ್ಯಾಂಡ್ ಆಡಿದ ಎರಡು ಪಂದ್ಯಗಳಲ್ಲಿಯೂ ಗೆದ್ದು ಅಜೇಯವಾಗಿದೆ. ಇತ್ತಂಡಗಳು ಹ್ಯಾಟ್ರಿಕ್ ಗೆಲುವಿನ ಹಂಬಲದಲ್ಲಿದೆ.
ತಂಡಗಳ
ಭಾರತ: ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಕುಲ್‌ದೀಪ್ ಯಾದವ್, ವರುಣ್ ಚಕ್ರವರ್ತಿ.
ನ್ಯೂಜಿಲೆಂಡ್: ವಿಲ್ ಯಂಗ್, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್, ಡ್ಯಾರಿಲ್ ಮಿಚೆಲ್, ಟಾಮ್ ಲೇಥಮ್(ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮೈಕಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ವಿಲಿಯಂ ರೌರ್ಕಿ.