ಮುಂಬೈ: ಆಡುವ ಬಳಗಿಂದ ರೋಹಿತ್ ಔಟ್ ಆಗಿದ್ದಾರೆ.
ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (MI vs KKR) ನಡುವಿನ ಪಂದ್ಯಕ್ಕೆ ರೋಹಿತ್ ಅಲಭ್ಯರಾಗಿದ್ದಾರೆ. ಈ ಪಂದ್ಯದ ಟಾಸ್ ಕೂಡ ಮುಗಿದಿದ್ದು, ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಟಾಸ್ ಗೆದ್ದ ಬಳಿಕ ತಂಡಗಳ ಪ್ಲೇಯಿಂಗ್ 11 ಪ್ರಕಟಿಸುವ ವೇಳೆ ಆಘಾತಕ್ಕಾರಿ ಸುದ್ದಿಯೊಂದು ಹೊರಬಿದ್ದಿದೆ. ಐದು ಬಾರಿ ಚಾಂಪಿಯನ್ ಮಾಡಿದ್ದ ಮಾಜಿ ನಾಯಕ ರೋಹಿತ್ ಶರ್ಮಾ (Rohit Sharma) ರನ್ನು ಕೈ ಬಿಡಲಾಗಿದೆ.
ಇಂಗ್ಲೆಂಡ್ನ ಸ್ಫೋಟಕ ಬ್ಯಾಟ್ಸ್‌ಮನ್ ವಿಲ್ ಜ್ಯಾಕ್ಸ್ ಮತ್ತೊಮ್ಮೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಮೊದಲ ಪಂದ್ಯದಲ್ಲಿ ಆಡುವ ಅವಕಾಶ ಪಡೆದಿದ್ದ ಜ್ಯಾಕ್ಸ್ರನ್ನು ಎರಡನೇ ಪಂದ್ಯದಿಂದ ಕೈಬಿಡಲಾಗಿತ್ತು. ಆದರೆ ಮೂರನೇ ಪಂದ್ಯಕ್ಕೆ ಮತ್ತೆ ತಂಡದಲ್ಲಿ ಆಡಿಸಲಾಗುತ್ತಿದೆ.
ಮುಂಬೈ ಇಂಡಿಯನ್ಸ್ ರೋಹಿತ್ ಅವರನ್ನು ಆಡುವ ಹನ್ನೊಂದರ ಬಳಗದಿಂದ ಕೈಬಿಟ್ಟಿರಬಹುದು. ಆದರೆ ಅವರು ಎರಡನೇ ಇನ್ನಿಂಗ್ಸ್ನಲ್ಲಿ ಬ್ಯಾಟಿಂಗ್ಗೆ ಖಚಿತವಾಗಿ ಬರಲಿದ್ದಾರೆ. ತಂಡವು ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡುತ್ತಿರುವ ಕಾರಣ ರೋಹಿತ್ ಶರ್ಮಾರನ್ನು ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿಸಲಾಗಿದೆ.