ದುಬೈ: ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡಕ್ಕೆ ಗುಂಪು ಹಂತದ ಕೊನೇ ಪಂದ್ಯ ಬಾಕಿ ಇದೆ. ಮಾರ್ಚ್ 2 ರಂದು ನ್ಯೂಜಿಲ್ಯಾಂಡ್(IND vs NZ) ವಿರುದ್ಧ ಭಾರತ ಆಡಬೇಕಾಗಿದೆ. ಟೀಮ್ ಇಂಡಿಯಾ ಸೆಮಿಫೈನಲ್ ಪ್ರವೇಶಿಸಿರುವ ಕಾರಣ ಈ ಪಂದ್ಯ ಅಷ್ಟಾಗಿ ಮಹತ್ವ ಪಡೆದಿಲ್ಲ. ಹೀಗಾಗಿ ನಾಯಕ ರೋಹಿತ್ ಶರ್ಮ(Rohit Sharma) ಮತ್ತು ವೇಗಿ ಮೊಹಮ್ಮದ್ ಶಮಿ(mohammed shami)ಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ರೋಹಿತ್ ಮತ್ತು ಶಮಿ ಬದಲಿಗೆ ರಿಷಭ್ ಪಂತ್ ಮತ್ತು ಎಡಗೈ ವೇಗಿ ಅರ್ಶ್‌ದೀಪ್ ಸಿಂಗ್‌ಗೆ ಅವಕಾಶ ನೀಡಲಾಗುವುದು ಎಂದು ತಿಳಿದುಬಂದಿದೆ. ಇದರಿಂದಾಗಿ ಕನ್ನಡಿಗ ಕೆ.ಎಲ್. ರಾಹುಲ್(KL Rahul) ಆರಂಭಿಕನಾಗಿ ಗಿಲ್ ಜತೆ ಇನಿಂಗ್ಸ್ ಆರಂಭಿಸಲಿದ್ದಾರೆ ಎಂದು ಮಾಹಿತಿ ಬಂದಿದೆ.
ಶಮಿ ಕಳೆದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಮೊಣಕಾಲಿ ಗಾಯದಿಂದ ಬಳಲಿದ್ದು ಕಂಡು ಬಂದಿತ್ತು. ನೋವಿನ ಮಧ್ಯೆಯೂ ಅವರು ಬೌಲಿಂಗ್ ಮುಂದುವರಿಸಿದ್ದರು. ರೋಹಿತ್ ಸ್ನಾಯು ಸೆಳೆತದಿಂದ ಬಳಲುತ್ತಿದ್ದು ಸ್ಪಲ್ಪ ಮಟ್ಟಿನ ಫಿಟ್ನೆಸ್ ಸಮಸ್ಯೆ ಹೊಂದಿದ್ದಾರೆ ಎನ್ನಲಾಗಿದೆ. ಸೆಮಿಫೈನಲ್‌ಗೆ ಇವರಿಬ್ಬರ ಲಭ್ಯತೆ ಮುಖ್ಯ.
ಪಾಕಿಸ್ತಾನ ಪಂದ್ಯಕ್ಕೂ ಮುನ್ನ ವೈರಲ್ ಜ್ವರದಿಂದ ಬಳಲುತ್ತಿದ್ದ ರಿಷಭ್ ಪಂತ್ ಸಂಪೂರ್ಣ ಗುಣಮುಖರಾಗಿ ಬುಧವಾರ ಬ್ಯಾಟಿಂಗ್ ಅಭ್ಯಾಸ ನಡೆಸಿದ್ದರು. ಆದರೆ ಉಪ ನಾಯಕ ಶುಭಮನ್ ಗಿಲ್ ಅಭ್ಯಾಸ ನಡೆಸಿರಲಿಲ್ಲ.
ಕಿವೀಸ್ ವಿರುದ್ಧದ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ
ಶುಭಮನ್ ಗಿಲ್, ಕೆ.ಎಲ್ ರಾಹುಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಅರ್ಶ್‌ದೀಪ್ ಸಿಂಗ್, ಕುಲದೀಪ್ ಯಾದವ್.