ನವದೆಹಲಿ: ಭಾರತ ತಂಡದ ನಾಯಕ ರೋಹಿತ್ ಶರ್ಮಾಗೆ (Rohit Sharma) ಬ್ಯಾಟಿಂಗ್‌ನಲ್ಲಿ ಸತತ ವೈಫಲ್ಯದ ಜತೆಗೆ ನಾಯಕತ್ವ ಕಳೆದುಕೊಳ್ಳುವ ಭೀತಿ ಎದುರಾಗಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿಯೇ ಟೀಮ್ ಇಂಡಿಯಾ ಇದೀಗ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಣಕ್ಕೆ ಇಳಿಯಲಿದೆ. ಇದರ ನಡುವೆ ರೋಹಿತ್ ಶರ್ಮಾಗೆ ಬಿಸಿಸಿಐ ಕಡೆಯಿಂದ ಕಹಿ ಸುದ್ದಿ ಬಂದಿದೆ. ಮುಂದಿನ ಇಂಗ್ಲೆಂಡ್ ಪ್ರವಾಸದ ನಿಮಿತ್ತ ಜಸ್‌ಪ್ರೀತ್ ಬುಮ್ರಾಗೆ ಟೆಸ್ಟ್ ತಂಡದ ನಾಯಕತ್ವ ನೀಡಲು ಬಿಸಿಸಿಐ ಮುಂದಾಗಿದೆ. ಆ ಮೂಲಕ ರೋಹಿತ್ ಶರ್ಮಾ ಅವರನ್ನು ಟೆಸ್ಟ್ ತಂಡದಿಂದ ಕೈ ಬಿಡಲಿದೆ ಎಂದು ವರದಿಯಾಗಿದೆ.
ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ, ಆಸ್ಟ್ರೇಲಿಯಾ ವಿರುದ್ಧ 1-3 ಅಂತರದಲ್ಲಿ ಟೆಸ್ಟ್ ಸರಣಿಯನ್ನು ಸೋತಿತ್ತು ಇದರಿಂದಾಗಿ ಅವರ ಬ್ಯಾಟಿಂಗ್ ಹಾಗೂ ನಾಯಕತ್ವದ ಬಗ್ಗೆ ಬಿಸಿಸಿಐ ಆಯ್ಕೆದಾರರು ಅಸಮಾಧಾನಗೊಂಡಿದ್ದಾರೆ ರೋಹಿತ್ ಶರ್ಮಾ ಅವರಿಗೂ ಕೂಡ ಮಾತನ್ನು ಬಿಸಿಸಿಐ ತಿಳಿಸಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: ರೋಹಿತ್ ಶರ್ಮಾ ಮನೆಗೆ ಹೊಸ ಅತಿಥಿ!
ಆಸ್ಟ್ರೇಲಿಯಾ ಪ್ರವಾಸದಲ್ಲಿ ಜಸ್‌ಪ್ರೀತ್ ಬುಮ್ರಾ ಗಾಯಕ್ಕೆ ತುತ್ತಾಗಿದ್ದರು. ಈ ಹಿನ್ನೆಲೆಯಲ್ಲಿ ಅವರು ಇಂಗ್ಲೆಂಡ್ ವಿರುದ್ದದ ವೈಟ್ ಬಾಲ್ ಸರಣಿಗಳಿಂದ ಹೊರಗುಳಿದಿದ್ದರು. ಇದೀಗ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿರುವ ಜಸ್‌ಪ್ರೀತ್ ಬುಮ್ರಾ ಇನ್ನೂ ಬೌಲಿಂಗ್ ಆರಂಭಿಸಿಲ್ಲ. ಅವರನ್ನು ಟೆಸ್ಟ್ ತಂಡದ ನಾಯಕನನ್ನಾಗಿ ನೇಮಿಸುವ ಸಲುವಾಗಿ ಬಿಸಿಸಿಐ, ಬುಮ್ರಾ ಅವರನ್ನು ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಆಡಲು ಪರಿಗಣಿಸಿಲ್ಲ ಎಂದು ಕೂಡ ವರದಿಯಾಗಿದೆ.
ರೋಹಿತ್ಗೆ ಇಲ್ಲಿ ಟೆಸ್ಟ್ ಸ್ಥಾನ
ರೋಹಿತ್ ಶರ್ಮಾ ಭಾರತ ಟೆಸ್ಟ್ ತಂಡಕ್ಕೆ ಆಯ್ಕೆಯಾಗುವುದು ಬಹುತೇಕ ಅನುಮಾನ ಎಂದೇ ಹೇಳಲಾಗುತ್ತದೆ. ಅವರು ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಪರ ಆಡುವುದನ್ನು ಮುಂದುವರಿಸಲಿದ್ದಾರೆ. ಏಕದಿನ ತಂಡದಲ್ಲಿ ಅವರು ನಾಯಕನಾಗಿ ಮುಂದುವರಿಯಬೇಕೆಂದರೆ, ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ತೋರುವುದು ಅನಿವಾರ್ಯ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿ ಗೆದ್ದರೆ, ಬಿಸಿಸಿಐಗೆ ಮುಂಬೈ ಆಟಗಾರನನ್ನೇ ಏಕದಿನ ತಂಡದ ನಾಯಕನನ್ನಾಗಿ ಮುಂದುವರಿಸಲಿದೆ.
3 ಟೆಸ್ಟ್ ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿರುವ ಬುಮ್ರಾ
ಜಸ್‌ಪ್ರೀತ್ ಬುಮ್ರಾ ಇದುವರೆಗೆ ಮೂರು ಟೆಸ್ಟ್ ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದಾರೆ. ಎರಡೂ ಸಂದರ್ಭಗಳಲ್ಲಿ ರೋಹಿತ್ ಲಭ್ಯವಿರಲಿಲ್ಲ. 2022 ರಲ್ಲಿ ಬರ್ಮಿಂಗ್‌ಹ್ಯಾಮ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಐದನೇ ಮತ್ತು ಅಂತಿಮ ಟೆಸ್ಟ್ ಪಂದ್ಯದಲ್ಲಿ, ರೋಹಿತ್ ಶರ್ಮಾ ಕೋವಿಡ್ ವಿರುದ್ಧ ಹೋರಾಡುತ್ತಿದ್ದಾಗ ಬುಮ್ರಾ ನಾಯಕತ್ವ ವಹಿಸಿಕೊಳ್ಳಬೇಕಾಗಿತ್ತು. ಭಾರತ ಆ ಟೆಸ್ಟ್ ಪಂದ್ಯದಲ್ಲಿ ಸೋತಿತು, ಆದರೆ ಬುಮ್ರಾ ಉತ್ತಮ ನಾಯಕತ್ವದಲ್ಲಿ ಎಲ್ಲರ ಗಮನವನ್ನು ಸೆಳೆದಿದ್ದರು. 2024ರ ಕೊನೆಯಲ್ಲಿ ರೋಹಿತ್ ಶರ್ಮಾ ತನ್ನ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದ ಕಾರಣ, ಆಸ್ಟ್ರೇಲಿಯಾ ವಿರುದ್ಧ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಭಾರತವನ್ನು ಮುನ್ನಡೆಸಿದ್ದರು ಹಾಗೂ ಈ ಪಂದ್ಯದಲ್ಲಿ ಭಾರತ ಗೆದ್ದಿತ್ತು.