ಬೆಂಗಳೂರು: ರಾಜ್ಯದಲ್ಲಿ ಬಜೆಟ್ ಅಧಿವೇಶನದ ಬಳಿಕ ಸಾಲು ಸಾಲು ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದೆ.
ಈಗ ನಿರೀಕ್ಷೆಯೇ ಇಲ್ಲದ ಡಿಸೇಲ್ ಬೆಲೆಯನ್ನು ನಿನ್ನೆ ತಡರಾತ್ರಿ ಏರಿಕೆ ಮಾಡಲಾಗಿದೆ. ರಾಜ್ಯ ಸರ್ಕಾರದ ಈ ನಡೆಗೆ ಬಿಜೆಪಿ ತೀವ್ರ ಖಂಡನೆ ವ್ಯಕ್ತವಡಿಸಿದೆ.
ರಾಜ್ಯ ಸರ್ಕಾರವು ಪ್ರತಿ ಲೀಟರ್ ಡೀಸೆಲ್ ಬೆಲೆಯನ್ನು 2 ರೂ.ಗೆ ಏರಿಕೆ ಮಾಡಿದೆ. ರಾಜ್ಯ ಸರ್ಕಾರದ ನಡೆಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಬಿ.ವೈ.ವಿಜಯೇಂದ್ರ, ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಡಾ.ಸಿ.ಎನ್. ಅಶ್ವತ್ಥ್‌ನಾರಾಯಣ್, ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ನಾಯಕರು ಸರ್ಕಾರದ ನಡೆಯನ್ನು ಖಂಡಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯ ಮೂಲಕ ನಾಯಕರು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ರಾಜ್ಯ ಸರ್ಕಾರವು ದಿನದಿಂದ ದಿನಕ್ಕೆ ರಾಜ್ಯ ಸರ್ಕಾರ ಜನರಿಗೆ ಶಾಕ್ ಕೊಡುತ್ತಿದೆ. ಇಲ್ಲಿಯವರೆಗೂ ದಿನನಿತ್ಯ ಬಳಕೆ ವಸ್ತುಗಳು ಸೇರಿದಂತೆ ಬಸ್ ದರ, ನಮ್ಮ ಮೆಟ್ರೋ ದರ, ವಿದ್ಯುತ್ ದರ, ನೊಂದಣಿ ಶುಲ್ಕ, ಮುದ್ರಾಂಕ ಶುಲ್ಕ, ಕಸದ ಮೇಲಿನ ಶುಲ್ಕ ಏರಿಕೆ ಮಾಡಲಾಗಿತ್ತು. ಈಗ ಡಿಸೇಲ್ ಬೆಲೆ ಏರಿಕೆ ಮಾಡಿದೆ ಎಂದು ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.