ಬೆಂಗಳೂರು : ನಗರವನ್ನು ಬೆಚ್ಚಿಬೀಳಿಸಿದ್ದ ರೌಡಿಶೀಟರ್ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಡಿಜೆ ಹಳ್ಳಿ ರೌಡಿಶೀಟರ್ ಆಗಿದ್ದ ಪವನ್ ನನ್ನು ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯ ಅಮರಜ್ಯೋತಿ ನಗರದಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.
ಈ ಪ್ರಕರಣದ ಪ್ರಮುಖ ಆರೋಪಿ ರಂಜಿತ್ ಬಾಗಲೂರಿನ ನಿರ್ಜನ ಪ್ರದೇಶದಲ್ಲಿ ಅಡಗಿದ್ದಾನೆ ಎಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಬಂಧಿಸಲು ಮುಂದಾದ ವೇಳೆ ಆರೋಪಿ ಲಾಂಗ್‌ನಿಂದ ಪೊಲೀಸರ ಮೇಲೆ ಹಲ್ಲೆ ನಡೆಸಿದನೆಂದು ತಿಳಿದುಬಂದಿದ್ದು, ಈ ವೇಳೆ ಆತ್ಮರಕ್ಷಣಾರ್ಥವಾಗಿ ಪೊಲೀಸರು ಗುಂಡು ಹಾರಿಸಿದ್ದಾ ಎನ್ನಲಾಗಿದೆ.
ರಂಜಿತ್ ಕಾಲಿಗೆ ಗುಂಡು ತಗುಲಿ ಗಾಯಗೊಂಡಿದ್ದಾನೆ. ಬಳಿಕ ಅವನನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮತ್ತಷ್ಟು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ಬೈಕ್‌ಗೆ ಟ್ರಕ್ ಡಿಕ್ಕಿ | ಮೂವರು ಸ್ಥಳದಲ್ಲೇ ಸಾವು



















