ಹಾಸನ : ನಗರದಲ್ಲಿ ರೌಡಿಶೀಟರ್ ಓರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ನಗರದ ಚನ್ನಪಟ್ಟಣ ಕೋರ್ಟ್ ಸಮೀಪದ ರಸ್ತೆಯಲ್ಲಿ ಮಧ್ಯರಾತ್ರಿ ಸುಮಾರು 12 ಗಂಟೆ ವೇಳೆಗೆ ಈ ಕೃತ್ಯ ನಡೆದಿದ್ದು, ಮೃತನನ್ನು 42 ವರ್ಷದ ಮಂಜೇಶ್ ಕುಮಾರ್ ಎಂದು ಗುರುತಿಸಲಾಗಿದೆ.
ಮಂಜೇಶ್ ಕುಮಾರ್ ವಿರುದ್ಧ ಕೊಲೆ, ಕೊಲೆಯತ್ನ ಸೇರಿದಂತೆ ನಾಲ್ಕು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು ಎಂದು ತಿಳಿದುಬಂದಿದೆ. ಹಾಸನ–ಮೈಸೂರು ರಸ್ತೆಯ ಸಮೀಪ ನಡೆದ ಘಟನೆಯಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಚ್ಚಿ ಕೊಲೆ ಮಾಡಿರುವುದಾಗಿ ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಬಡಾವಣೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಳೆಯ ವೈಷಮ್ಯ ಅಥವಾ ಎದುರಾಳಿ ಗ್ಯಾಂಗ್ ಸದಸ್ಯರ ಕೈವಾಡ ಇರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಹತ್ಯೆಯ ನಿಖರ ಕಾರಣ ಹಾಗೂ ಆರೋಪಿಗಳ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.
ಇದನ್ನೂ ಓದಿ : ಜಮೀರ್ ಬಗ್ಗೆ ಕೋಡಿಮಠ ಶ್ರೀಗಳಿಂದ ಸ್ಫೋಟಕ ಭವಿಷ್ಯ – ಸಚಿವ ಸ್ಥಾನ ಸಿಗುತ್ತಾ? ಇಲ್ವಾ?


















