ಆರ್.ಆರ್.ನಗರ ವಂಚನೆ ಪ್ರಕರಣದಲ್ಲಿಯೂ ಐಶ್ವರ್ಯಗೌಡ ದಂಪತಿಗೆ ಜಾಮೀನು ಮಂಜೂರಾಗಿದೆ.
ಮಾಜಿ ಸಂಸದ ಡಿ.ಕೆ. ಸುರೇಶ್ ಸಹೋದರಿ ಸೋಗಿನಲ್ಲಿ ಮಹಿಳೆಗೆ 3.25 ಕೋಟಿ ರೂ.ನಗದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಬಂಧಿತರಾಗಿದ್ದ ಐಶ್ವರ್ಯಗೌಡ ದಂಪತಿಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
ಆದರೆ, ಜಾಮೀನು ಪ್ರತಿ ಆದೇಶ ತಲುಪಿದ ನಂತರವಷ್ಟೇ ಆರೋಪಿಗಳು ಬಿಡುಗಡೆಯಾಗಲಿದ್ದಾರೆ. ವಿಚಾರಣೆಗೆ ಬರುವಂತೆ ಆರೋಪಿಗಳಿಗೆ ಲಿಖಿತ ರೂಪದಲ್ಲಿ ನೋಟಿಸ್ ಜಾರಿ ಮಾಡಿಲ್ಲ. ಈ ಪ್ರಕರಣದಲ್ಲಿ ಪೊಲೀಸರು ಬಂಧನ ಪ್ರಕ್ರಿಯೆಯನ್ನು ಕ್ರಮಬದ್ಧವಾಗಿ ಮಾಡಿಲ್ಲ. ಹೀಗಾಗಿ ತಮ್ಮ ಕಕ್ಷಿದಾರರಿಗೆ ಜಾಮೀನು ಕೋರಿ ಮಂಜೂರು ಮಾಡುವಂತೆ ಆರೋಪಿಗಳ ಪರ ವಕೀಲ ಸುನೀಲ್ ರೆಡ್ಡಿ ಮನವಿ ಮಾಡಿದ್ದರು. ಮನವಿ ಪುರಸ್ಕರಿಸಿ ಆರೋಪಿತರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.