ಬೆಂಗಳೂರು: ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು, ಅದರಲ್ಲೂ ಭಾರತೀಯ ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಶುಭ ಸಮಾಚಾರ ದೊರೆತಿದೆ. ಹೌದು, ಭಾರತೀಯ ರೈಲ್ವೆಯಲ್ಲಿ ಖಾಲಿ ಇರುವ 22,195 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 22,195 ಡಿ ಗ್ರೂಪ್ ಹುದ್ದೆಗಳ ನೇಮಕಾತಿಗಾಗಿ (RRB Group D Recruitment 2026) ರೈಲ್ವೆ ನೇಮಕಾತಿ ಮಂಡಳಿಯು ಅಧಿಸೂಚನೆ ಹೊರಡಿಸಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ರೈಲ್ವೆ
ಒಟ್ಟು ಹುದ್ದೆಗಳು: 22,195
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಮಾರ್ಚ್ 2
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಸ್ಸೆಸ್ಸೆಲ್ಸಿ, ಐಟಿಐ ಪಾಸಾಗಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 18 ವರ್ಷದಿಂದ 33 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 18 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ.
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದ್ದರೆ, ಒಬಿಸಿ ಸಮುದಾಯದವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಎಸ್ಸಿ, ಎಸ್ಟಿ, ಮಾಜಿ ಸೈನಿಕರು ಹಾಗೂ ಮಹಿಳೆಯರಿಗೆ 250 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದವರಿಗೆ 500 ರೂಪಾಯಿ ಅರ್ಜಿ ಶುಲ್ಕವನ್ನುನಿಗದಿಪಡಿಸಲಾಗಿದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತರು https://indianrailways.gov.in/ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ : ಒಲಿಂಪಿಕ್ಸ್ ಆಯೋಜನೆ ಕನಸು ಇನ್ನೂ ಜೀವಂತ | ಆದರೆ ಭಾರತದ ಮುಂದಿದೆ ಪಾಕ್-ಬಾಂಗ್ಲಾ ಸವಾಲು!



















