ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ರೈಲ್ವೆ ನೇಮಕಾತಿ ಮಂಡಳಿಯು (RRB NTPC Graduate Reruitment 2025) 5,810 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಇದು ಒಳ್ಳೆಯ ಅವಕಾಶವಾಗಿದೆ. ಸ್ಟೇಷನ್ ಮಾಸ್ಟರ್, ಟ್ರಾಫಿಕ್ ಅಸಿಸ್ಟೆಂಟ್ ಸೇರಿ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರೈಲ್ವೆ ನೇಮಕಾತಿ ಮಂಡಳಿ (RRB)
ಒಟ್ಟು ಹುದ್ದೆಗಳು: 5,810
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಹುದ್ದೆಗಳ ಹೆಸರು: ಸ್ಟೇಷನ್ ಮಾಸ್ಟರ್, ಟ್ರಾಫಿಕ್ ಅಸಿಸ್ಟೆಂಟ್ ಇತ್ಯಾದಿ
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 20
ಕನಿಷ್ಠ 18ರಿಂದ 33 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 35,400 ರೂಪಾಯಿವರೆಗೆ ಸಂಬಳ ನೀಡಲಾಗುತ್ತಿದೆ. ದೇಶದ ಹಲವು ಭಾಗಗಳಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದು. ಬೆಂಗಳೂರಿನಲ್ಲಿ 241 ಹುದ್ದೆಗಳು ಖಾಲಿ ಇವೆ. ಅರ್ಜಿ ಸಲ್ಲಿಸುವವರು rrbchennai.gov.in ವೆಬ್ ಸೈಟ್ ಗೆ ಭೇಟಿ ನೀಡಬಹುದು.
ಯಾವ ಹುದ್ದೆ ಎಷ್ಟು ಖಾಲಿ?
ಚೀಫ್ ಕಮರ್ಷಿಯಲ್ ಕಮ್ ಟಿಕೆಟ್ ಸೂಪರ್ ವೈಸರ್ – 161
ಸ್ಟೇಷನ್ ಮಾಸ್ಟರ್ – 615
ಗೂಡ್ಸ್ ಟ್ರೈನ್ ಮ್ಯಾನೇಜರ್ – 3,416
ಜೂನಿಯರ್ ಅಕೌಂಟ್ಸ್ ಅಸಿಸ್ಟೆಂಟ್ ಕಮ್ ಟೈಪಿಸ್ಟ್ – 921ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ – 638
ಟ್ರಾಫಿಕ್ ಅಸಿಸ್ಟೆಂಟ್ – 59
ಜನರಲ್, ಇಡಬ್ಲ್ಯೂಎಸ್, ಒಬಿಸಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ 500 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇಎಸ್ಎಂ, ಇಬಿಸಿ, ವಿಶೇಷ ಚೇತನ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ 250 ರೂಪಾಯಿ ಅರ್ಜಿ ಶುಲ್ಕವಿದೆ. ಮಾನ್ಯತೆ ಪಡೆದ ವಿವಿಯಿಂದ ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು.
ಇದನ್ನೂ ಓದಿ : ಓಪ್ಪೋದಿಂದ ‘ಫೈಂಡ್ X9’ ಸರಣಿ ಬಿಡುಗಡೆ : ಬೆಲೆ ಮತ್ತು ಫೀಚರ್ಗಳ ಸಂಪೂರ್ಣ ಮಾಹಿತಿ ಇಲ್ಲಿದೆ



















