ಬೆಂಗಳೂರು: ಭಾರತೀಯ ರೈಲ್ವೆ ಇಲಾಖೆಯ ರೈಲ್ವೆ ನೇಮಕಾತಿ ಮಂಡಳಿಯು (RRB NTPC Recruitment 2025) ಬರೋಬ್ಬರಿ 8,850 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ನಾನ್-ಟೆಕ್ನಿಕಲ್ ಪಾಪುಲರ್ ಕೆಟಗರೀಸ್ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಹರು ಹಾಗೂ ಆಸಕ್ತಿ ಹೊಂದಿದವರು ಅರ್ಜಿ ಸಲ್ಲಿಸುವ ಮೂಲಕ ಹುದ್ದೆಗಳನ್ನು ಗಿಟ್ಟಿಸಿಕೊಳ್ಳಬಹುದಾಗಿದೆ.
“ಹುದ್ದೆಗಳ ವಿವರ”
ನೇಮಕಾತಿ ಸಂಸ್ಥೆ: ರೈಲ್ವೆ ನೇಮಕಾತಿ ಮಂಡಳಿ (RRB)
ಹುದ್ದೆಗಳ ಹೆಸರು: ಸ್ಟೇಷನ್ ಮಾಸ್ಟರ್, ಕ್ಲರ್ಕ್ ಇತ್ಯಾದಿ
ಒಟ್ಟು ಹುದ್ದೆಗಳು: 8,850
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆ ಆರಂಭವಾಗುವ ದಿನಾಂಕ: ಅಕ್ಟೋಬರ್ 21
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 27
ಸ್ಟೇಷನ್ ಮಾಸ್ಟರ್, ಕ್ಲರ್ಕ್, ಗೂಡ್ಸ್ ಟ್ರೈನ್ ಮ್ಯಾನೇಜರ್, ಜೂನಿಯರ್ ಕ್ಲರ್ಕ್, ಟ್ರೇನ್ಸ್ ಕ್ಲರ್ಕ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಕನಿಷ್ಠ 18ರಿಂದ 36 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ದ್ವಿತೀಯ ಪಿಯುಸಿ ಹಾಗೂ ಪದವಿ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ನೇಮಕಾತಿ ಹೊಂದಿದವರಿಗೆ ಮಾಸಿಕ 35,400 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಎಸ್ಸಿ, ಎಸ್ಟಿ ಸಮುದಾಯದವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಜನರಲ್ ಹಾಗೂ ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಜನರಲ್, ಒಬಿಸಿ, ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ 500 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದ ಅಭ್ಯರ್ಥಿಗಳಿಗೆ 250 ರೂಪಾಯಿ ಶುಲ್ಕವಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವವರು rrbcdg.gov.in ವೆಬ್ ಸೈಟ್ ಗೆ ಭೇಟಿ ನೀಡಬಹುದು.