ಬೆಂಗಳೂರು: ನೀವು ಕೇಂದ್ರ ಸರ್ಕಾರದ ಹುದ್ದೆ ಹುಡುಕುತ್ತಿದ್ದೀರಾ? ಅದರಲ್ಲೂ ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗಿಲ್ಲಿ ಸುವರ್ಣಾವಕಾಶ ಇದೆ. ದೇಶದ ರೈಲ್ವೆ ಇಲಾಖೆಯಲ್ಲಿ (RRB Recruitment 2025) ಖಾಲಿ ಇರುವ 368 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸೆಕ್ಷನ್ ಕಂಟ್ರೋಲರ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ರೈಲ್ವೆ ನೇಮಕಾತಿ ಮಂಡಳಿ
ಒಟ್ಟು ಹುದ್ದೆಗಳು: 368
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 14
ಉದ್ಯೋಗದ ಸ್ಥಳ: ದೇಶಾದ್ಯಂತ
ರೈಲ್ವೆಯ ವಿವಿಧ ವಲಯಗಳಲ್ಲಿ ನೇಮಕಾತಿ ನಡೆಯುತ್ತಿದೆ. ಕೇಂದ್ರ ರೈಲ್ವೆ 25 ಹುದ್ದೆಗಳು, ಪೂರ್ವ ಕರಾವಳಿ ರೈಲ್ವೆ 24 ಹುದ್ದೆ, ಪೂರ್ವ ಮಧ್ಯ ರೈಲ್ವೆ 32 ಹುದ್ದೆ, ಪೂರ್ವ ರೈಲ್ವೆ 39 ಹುದ್ದೆ, ಉತ್ತರ ಮಧ್ಯ್ ರೈಲ್ವೆ 16 ಹುದ್ದೆ, ಈಶಾನ್ಯ ರೈಲ್ವೆ 9 ಹುದ್ದೆ, ಈಶಾನ್ಯ ಗಡಿನಾಡು ರೈಲ್ವೆ 21 ಹುದ್ದೆಗಳು ಸೇರಿ ಹಲವು ವಲಯಗಳಲ್ಲಿ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
22ರಿಂದ 33 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಲಿಖಿತ ಪರೀಕ್ಷೆ, ಕೌಶಲ ಪರೀಕ್ಷೆ, ಡಾಕ್ಯುಮೆಂಟ್ ವೇರಿಫಿಕೇಶನ್ ಹಾಗೂ ವೈದ್ಯಕೀಯ ತಪಾಸಣೆ ಬಳಿಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಆರಂಭಿಕ ಸಂಬಳವೇ 35,400 ರೂಪಾಯಿ ಇರುತ್ತದೆ. ಸೆಪ್ಟೆಂಬರ್ 15ರಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 14ರವರೆಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು rrbapply.gov.in ವೆಬ್ ಸೈಟ್ ಗೆ ಭೇಟಿ ನೀಡಿ, ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಕನಿಷ್ಠ 20ರಿಂದ 33 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಮಾನ್ಯತೆ ಪಡೆದ ಯಾವುದೇ ವಿವಿ ಅಥವಾ ಮಂಡಳಿಗಳಲ್ಲಿ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.


















