ಬೆಂಗಳೂರು : ಭಾರತೀಯ ರೈಲ್ವೆಯಲ್ಲಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಒಳ್ಳೆಯ ಅವಕಾಶ ಸಿಕ್ಕಿದೆ. ಭಾರತೀಯ ರೈಲ್ವೆ ಇಲಾಖೆಯಲ್ಲಿ 11,127 ಅಸಿಸ್ಟಂಟ್ ಲೋಕೊ ಪೈಲಟ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಸೆಂಟ್ರಲ್ ರೈಲ್ವೆ, ಈಸ್ಟ್ ಸೆಂಟ್ರಲ್ ರೈಲ್ವೆ ಸೇರಿ ದೇಶದ ಹಲವು ರೈಲ್ವೆ ವಲಯಗಳಲ್ಲಿ ನೇಮಕಾತಿ ನಡೆಯುತ್ತಿದೆ. ಕರ್ನಾಟಕದಲ್ಲೂ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ರೈಲ್ವೆ
ಹುದ್ದೆ ಹೆಸರು: ಅಸಿಸ್ಟಂಟ್ ಲೋಕೊ ಪೈಲಟ್
ಒಟ್ಟು ಹುದ್ದೆಗಳು: 11,127
ಉದ್ಯೋಗ ಸ್ಥಳ: ದೇಶಾದ್ಯಂತ
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಎಸ್ಸೆಸ್ಸೆಲ್ಸಿ, ಐಟಿಐ, ಡಿಪ್ಲೋಮಾ, ಪದವಿ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ದಾಖಲೆ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿಯ ಸಂಪೂರ್ಣ ಮಾಹಿತಿ ಕುರಿತು ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ತಿಳಿದುಬಂದಿದೆ.
ಅರ್ಹತೆಗಳು ಏನು?
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ, ಎಸ್ ಸಿ, ಎಸ್ ಟಿ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ಇದೆ. ಜನರಲ್ ಕೆಟಗರಿ ಹಾಗೂ ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಅಭ್ಯರ್ಥಿಗಳಿಗೆ 500 ರೂ. ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 250 ಅರ್ಜಿ ಶುಲ್ಕ ಇದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಮೊದಲು indianrailways.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆ ಓದಿದ ಬಳಿಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು.
ಇದನ್ನೂ ಓದಿ : ಕೆಂಪುಕೋಟೆ ಸೇರಿ ದೇಶದ ಪ್ರಮುಖ ನಗರಗಳ ಮೇಲೆ ದಾಳಿಗೆ ಲಷ್ಕರ್ ಸಂಚು | ದೇಶಾದ್ಯಂತ ಹೈ ಅಲರ್ಟ್



















