ಬೆಂಗಳೂರು: ಉತ್ತರ ಕೇಂದ್ರ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ 1,763 ಹುದ್ದೆಗಳ ನೇಮಕಾತಿಗಾಗಿ (RRC NCR Act Apprentices Recruitment 2025) ಅಧಿಸೂಚನೆ ಹೊರಡಿಸಲಾಗಿದೆ. ಇದರೊಂದಿಗೆ ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಲು ಇಚ್ಛಿಸುವವರಿಗೆ ಸಿಹಿ ಸುದ್ದಿ ಸಿಕ್ಕಂತಾಗಿದೆ. ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 17 ಕೊನೆಯ ದಿನವಾಗಿದೆ.
ಹುದ್ದೆಗಳ ವಿವರ
ಹುದ್ದೆಯ ಹೆಸರು: ಉತ್ತರ ಕೇಂದ್ರ ರೈಲ್ವೆ ವಲಯ
ಒಟ್ಟು ಹುದ್ದೆ: 1,763
ಹುದ್ದೆಗಳ ಹೆಸರು: ಅಪ್ರೆಂಟಿಸ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 17
ಎಸ್ಸೆಸ್ಸಲ್ಸಿ, ಪಿಯುಸಿ ಹಾಗೂ ಐಟಿ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. 15ರಿಂದ 24 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಒಬಿಸಿ, ಜನರಲ್, ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ 100 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ ಹಾಗೂ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ತರಬೇತಿ ಅವಧಿಯಲ್ಲಿ ಸ್ಟೈಪೆಂಡ್ ಕೂಡ ನೀಡಲಾಗುತ್ತದೆ.
ಉತ್ತರ ಪ್ರದೇಶದ ಪ್ರಯಾಗರಾಜ್, ಝಾನ್ಸಿ ಹಾಗೂ ಆಗ್ರಾದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ, ಜನರಲ್ ಸಮುದಾಯದವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಸಲ್ಲಿಸುವುದು ಹೇಗೆ?
– ಮೊದಲಿಗೆ ಅಧಿಕೃತ ವೆಬ್ಸೈಟ್ rrcpryj.org ಗೆ ಭೇಟಿ ನೀಡಬೇಕು.
– ಅಪ್ರೆಂಟಿಸ್ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು.
– ಹುದ್ದೆಯ ಅಧಿಸೂಚನೆ ಓದಬೇಕು
– ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ಓಪನ್ ಮಾಡಬೇಕು
– ಯಾವುದೇ ತಪ್ಪಿಲ್ಲದೆ ಎಲ್ಲ ವಿವರಗಳನ್ನು ಭರ್ತಿ ಮಾಡಬೇಕು
– ದಾಖಲೆಗಳನ್ನು ಅಪ್ ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು
– ಫ್ಯೂಚರ್ ರೆಫರೆನ್ಸ್ ಗಾಗಿ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದಿಟ್ಟುಕೊಳ್ಳಬೇಕು



















