ಬೆಂಗಳೂರು : ನೀವೇನಾದರೂ ಎಂಎಸ್ಸಿ, ಡಿಪ್ಲೋಮಾ ಕೋರ್ಸ್ ಮುಗಿಸಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ, ನಮ್ಮ ಬೆಂಗಳೂರಿನಲ್ಲೇ ಇರುವ ರಾಮನ್ ರಿಸರ್ಚ್ ಇನ್ ಸ್ಟಿಟ್ಯೂಟ್ ನಲ್ಲಿ ಖಾಲಿ ಇರುವ 22 ಹುದ್ದೆಗಳ ನೇಮಕಾತಿಗಾಗಿ (RRI Recruitment 2026) ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಎಂಜಿನಿಯರ್, ಟ್ರೇಡ್ಸ್ ಮನ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ರಾಮನ್ ರಿಸರ್ಚ್ ಇನ್ ಸ್ಟಿಟ್ಯೂಟ್
ಒಟ್ಟು ಹುದ್ದೆಗಳು: 22
ಹುದ್ದೆಗಳ ಹೆಸರು: ಎಂಜಿನಿಯರ್, ಟ್ರೇಡ್ಸ್ ಮನ್
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನ: ಜುಲೈ 31
ಎಂಜಿನಿಯರ್, ಟ್ರೇಡ್ಸ್ ಮನ್, ಎಂಜಿನಿಯರಿಂಗ್ ಅಸಿಸ್ಟಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಐಟಿಐ, ಡಿಪ್ಲೋಮಾ ಹಾಗೂ ಎಂಎಸ್ಸಿ ಕೋರ್ಸ್ ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಜನರಲ್, ಒಬಿಸಿ ಅಭ್ಯರ್ಥಿಗಳಿಗೆ 250 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದವರಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಗರಿಷ್ಠ 35 ವರ್ಷದೊಳಗಿನವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಆಬ್ಜೆಕ್ಟಿವ್ ಟೆಸ್ಟ್, ಸಬ್ಜೆಕ್ಟಿವ್ ಟೆಸ್ಟ್, ಸ್ಕಿಲ್ ಟೆಸ್ಟ್ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ rri.res.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿಯನ್ನು ಡೌನ್ ಲೋಡ್ ಮಾಡಿಟ್ಟುಕೊಂಡಿರಬೇಕು
ಇದನ್ನೂ ಓದಿ : NIMHANS ಸಂಸ್ಥೆಯಲ್ಲಿ 6 ಕೌನ್ಸೆಲರ್ ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ



















