ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಬಿಜೆಪಿ 1,000 ಕೋಟಿ ಡೀಲ್? ಹುಮಾಯೂನ್ ಸ್ಟಿಂಗ್ ಆಪರೇಷನ್ ವಿಡಿಯೋ ಲೀಕ್, ಮೈತ್ರಿಗೆ ಗುಡ್‌ಬೈ ಹೇಳಿದ AIMIM

April 10, 2026
Share on WhatsappShare on FacebookShare on Twitter

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಉಳಿದಿರುವಂತೆಯೇ ಅಲ್ಲಿನ ರಾಜಕೀಯ ಹೊಸ ತಿರುವು ಪಡೆದುಕೊಂಡಿದೆ. ಆಡಳಿತಾರೂಢ ಟಿಎಂಸಿ ಪಕ್ಷದಿಂದ ಉಚ್ಚಾಟನೆಗೊಂಡಿರುವ, ಪ್ರಸ್ತುತ ‘ಆಮ್ ಜನತಾ ಉನ್ನಯನ್ ಪಾರ್ಟಿ’ (AJUP) ಸ್ಥಾಪಿಸಿರುವ ಹುಮಾಯೂನ್ ಕಬೀರ್ ಅವರದ್ದೆನ್ನಲಾದ ‘ಸ್ಟಿಂಗ್ ಆಪರೇಷನ್'(ರಹಸ್ಯ ಕಾರ್ಯಾಚರಣೆ) ವಿಡಿಯೋವೊಂದು ಭಾರೀ ಸಂಚಲನ ಸೃಷ್ಟಿಸಿದೆ. ಅವರು ಮುಸ್ಲಿಂ ಮತಗಳನ್ನು ವಿಭಜಿಸಲು ಬಿಜೆಪಿಯೊಂದಿಗೆ ಕೋಟ್ಯಂತರ ರೂಪಾಯಿಗಳ ಡೀಲ್ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಇದರ ಬೆನ್ನಲ್ಲೇ, ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಪಕ್ಷವು ಹುಮಾಯೂನ್ ಕಬೀರ್ ಪಕ್ಷದೊಂದಿಗಿನ ಮೈತ್ರಿಯನ್ನು ಕಡಿದುಕೊಂಡಿದೆ.

ಸ್ಟಿಂಗ್ ವಿಡಿಯೋದಲ್ಲಿ ಏನಿದೆ?

ಟಿಎಂಸಿ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ, ಮುಸ್ಲಿಂ ಮತಗಳನ್ನು ವಿಭಜಿಸುವ ಕುರಿತು ಕಬೀರ್ ಆಘಾತಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎನ್ನಲಾಗಿದೆ. ಪ್ರಧಾನಿ ಕಾರ್ಯಾಲಯದ (ಪಿಎಂಒ) ಜೊತೆ ತಾವು ಸಂಪರ್ಕದಲ್ಲಿರುವುದಾಗಿ ಹಾಗೂ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮತ್ತು ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರೊಂದಿಗೆ ಸಮನ್ವಯ ಸಾಧಿಸಲು ತಮಗೆ ಸೂಚನೆ ಬಂದಿರುವುದಾಗಿ ಕಬೀರ್ ಹೇಳಿರುವ ದೃಶ್ಯಾವಳಿಗಳಿವೆ. ಅಲ್ಪಸಂಖ್ಯಾತ ಮತಗಳನ್ನು ಟಿಎಂಸಿಯಿಂದ ಬೇರೆಡೆ ಸೆಳೆದು ಬಿಜೆಪಿಗೆ ಲಾಭ ಮಾಡಿಕೊಡಲು ಬರೋಬ್ಬರಿ 1,000 ಕೋಟಿ ರೂಪಾಯಿಗಳ ಬೃಹತ್ ಯೋಜನೆ ರೂಪಿಸಲಾಗಿದೆ. ಆ ಪೈಕಿ ಮುಂಗಡವಾಗಿ 200 ಕೋಟಿ ರೂ. ಸ್ವೀಕರಿಸಿರುವುದಾಗಿ ಅವರು ವಿಡಿಯೋದಲ್ಲಿ ಹೇಳಿದ್ದಾರೆ. ಜೊತೆಗೆ, “ಮುಸ್ಲಿಮರನ್ನು ಮೂರ್ಖರನ್ನಾಗಿಸುವುದು ಸುಲಭ” ಎಂಬ ವಿವಾದಾತ್ಮಕ ಹೇಳಿಕೆಯೂ ಇದರಲ್ಲಿದೆ. ಈ ವಿಡಿಯೋ ಆಧರಿಸಿ ಜಾರಿ ನಿರ್ದೇಶನಾಲಯ(ಇಡಿ) ಸಮಗ್ರ ತನಿಖೆ ನಡೆಸಬೇಕು ಎಂದು ಆಡಳಿತಾರೂಢ ಟಿಎಂಸಿ ಆಗ್ರಹಿಸಿದೆ.

ಇದು ‘ಎಐ’ ಸೃಷ್ಟಿ ಎಂದ ಕಬೀರ್

ತಮ್ಮ ವಿರುದ್ಧದ ಎಲ್ಲ ಆರೋಪಗಳನ್ನು ಹುಮಾಯೂನ್ ಕಬೀರ್ ಸಾರಾಸಗಟಾಗಿ ತಳ್ಳಿಹಾಕಿದ್ದಾರೆ. ಇದು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ಸೃಷ್ಟಿಸಲಾದ ನಕಲಿ ವಿಡಿಯೋ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ನವೆಂಬರ್ 2019 ರಿಂದ ತಾವು ಯಾವುದೇ ಬಿಜೆಪಿ ನಾಯಕರೊಂದಿಗೆ ಸಂಪರ್ಕದಲ್ಲಿಲ್ಲ, ಪ್ರಧಾನಿ ಮೋದಿ, ಅಮಿತ್ ಶಾ ಅಥವಾ ಹಿಮಂತ ಬಿಸ್ವಾ ಶರ್ಮಾ ಅವರನ್ನು ಭೇಟಿಯಾಗಿರುವ ಕುರಿತು ಒಂದೇ ಒಂದು ಸಾಕ್ಷ್ಯ ಅಥವಾ ಫೋಟೋ ಇದ್ದರೂ ಬಿಡುಗಡೆ ಮಾಡಲಿ ಎಂದು ಅವರು ಸವಾಲು ಹಾಕಿದ್ದಾರೆ. ತಮ್ಮನ್ನು ರಾಜಕೀಯವಾಗಿ ಎದುರಿಸಲಾಗದೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಟಿಎಂಸಿ ನಾಯಕರು ಇಂತಹ ಅಪಪ್ರಚಾರಕ್ಕೆ ಇಳಿದಿದ್ದಾರೆ. ಮುಸ್ಲಿಂ ಸಮುದಾಯ ಈ ಸುಳ್ಳು ವಿಡಿಯೋವನ್ನು ನಂಬಬಾರದು ಎಂದು ಮನವಿ ಮಾಡಿರುವ ಕಬೀರ್, ಟಿಎಂಸಿ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಎಚ್ಚರಿಸಿದ್ದಾರೆ.

ಮೈತ್ರಿಯಿಂದ ಹೊರಬಂದ ಎಐಎಂಐಎಂ

ಈ ಸ್ಟಿಂಗ್ ವಿಡಿಯೋ ವಿವಾದ ಭುಗಿಲೇಳುತ್ತಿದ್ದಂತೆ ಎಐಎಂಐಎಂ ಪಕ್ಷವು ಕಬೀರ್ ಅವರ ಎಜೆಯುಪಿ ಪಕ್ಷದೊಂದಿಗಿನ ಮೈತ್ರಿಯನ್ನು ತಕ್ಷಣವೇ ರದ್ದುಗೊಳಿಸಿದೆ. ಬಂಗಾಳದ ಮುಸ್ಲಿಮರ ಘನತೆ ಮತ್ತು ಪ್ರಾಮಾಣಿಕತೆಯನ್ನು ಪ್ರಶ್ನಿಸುವಂತಹ ಹೇಳಿಕೆಗಳನ್ನು ನೀಡುವವರ ಜೊತೆ ಯಾವುದೇ ಕಾರಣಕ್ಕೂ ಗುರುತಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಪಕ್ಷ ಸ್ಪಷ್ಟಪಡಿಸಿದೆ. ಈ ಬೆಳವಣಿಗೆಯಿಂದಾಗಿ, ಮುಂಬರುವ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳದೆ ಸಂಪೂರ್ಣ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಎಐಎಂಐಎಂ ಘೋಷಿಸಿದೆ. ಕಳೆದ ವರ್ಷ ಮುರ್ಷಿದಾಬಾದ್‌ನಲ್ಲಿ ಬಾಬರಿ ಮಸೀದಿ ಮಾದರಿಯ ಮಸೀದಿ ನಿರ್ಮಿಸುವ ಕುರಿತು ನೀಡಿದ್ದ ಹೇಳಿಕೆಯಿಂದ ವಿವಾದಕ್ಕೀಡಾಗಿದ್ದ ಕಬೀರ್ ಅವರನ್ನು ಟಿಎಂಸಿ, ಪಕ್ಷದಿಂದ ಉಚ್ಚಾಟಿಸಿತ್ತು. ಇದೀಗ 294 ಕ್ಷೇತ್ರಗಳ ಪಶ್ಚಿಮ ಬಂಗಾಳ ವಿಧಾನಸಭೆಗೆ ಏಪ್ರಿಲ್ 23 ಮತ್ತು 29 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮೇ 4 ರಂದು ಫಲಿತಾಂಶ ಪ್ರಕಟವಾಗಲಿದ್ದು, ಈಗ ನಡೆದಿರುವ ಹೊಸ ಬೆಳವಣಿಗೆ ಫಲಿತಾಂಶದ ಮೇಲೆ ಪರಿಣಾಮ ಬೀರಬಹುದೇ ಎಂಬ ಕುತೂಹಲ ಮೂಡಿಸಿದೆ.

ಇದನ್ನೂ ಓದಿ: ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಿ : ತುಷಾರ್ ಗಿರಿನಾಥ್ ಸೂಚನೆ

Tags: BJPIndiaKarnataka News beat
SendShareTweet
Previous Post

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಿ : ತುಷಾರ್ ಗಿರಿನಾಥ್ ಸೂಚನೆ

Next Post

10 ಗಂಟೆಗಳ ಕಾಲ ಪೋಷಕರ ‘ಡಿಜಿಟಲ್ ಅರೆಸ್ಟ್’.. 8ನೇ ತರಗತಿ ಬಾಲಕನ ಜಾಣ್ಮೆಯಿಂದ ತಪ್ಪಿದ ಭಾರೀ ವಂಚನೆ!

Related Posts

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!
ದೇಶ

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!
ದೇಶ

ದೆಹಲಿ ಪ್ರತಿಭಟನೆಗೂ ಮುನ್ನವೇ ಬಿಗ್ ಶಾಕ್: ಗುರುಗ್ರಾಮದ ನಿವಾಸದಲ್ಲೇ ಖ್ಯಾತ ಯೂಟ್ಯೂಬರ್ ಧ್ರುವ ರಾಠೀ ವಶಕ್ಕೆ!

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!
ದೇಶ

ದಿಲ್ಲಿ ಪ್ರತಿಭಟನೆಗೆ ಮುನ್ನವೇ ವಿಮಾನದೊಳಗೆಯೇ CJP ಸ್ಥಾಪಕ ಅಭಿಜಿತ್ ದೀಪ್ಕೆ ಸೇರಿ ನಾಯಕರ ದಿಢೀರ್ ಬಂಧನ!

10 ಲಕ್ಷ ರೂ. ಎಫ್.ಡಿ ಇರಿಸಿದರೆ ನಿಮಗೆ ತಿಂಗಳಿಗೆ ಎಷ್ಟು ಆದಾಯ ಬರುತ್ತದೆ?
ದೇಶ

10 ಲಕ್ಷ ರೂ. ಎಫ್.ಡಿ ಇರಿಸಿದರೆ ನಿಮಗೆ ತಿಂಗಳಿಗೆ ಎಷ್ಟು ಆದಾಯ ಬರುತ್ತದೆ?

ಇಸ್ರೇಲ್‌ನಿಂದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ ನಾಗರಿಕ ಶೌರ್ಯ ಪ್ರಶಸ್ತಿ ಘೋಷಣೆ
ದೇಶ

ಇಸ್ರೇಲ್‌ನಿಂದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ ನಾಗರಿಕ ಶೌರ್ಯ ಪ್ರಶಸ್ತಿ ಘೋಷಣೆ

ದೆಹಲಿಯಲ್ಲಿ ನಾಳೆ CJP ಪ್ರತಿಭಟನೆ : 23 ಸಾವಿರ ಭದ್ರತಾ ಸಿಬ್ಬಂದಿ ನಿಯೋಜನೆ, 150 ಬಾಡಿಕ್ಯಾಮ್ ಬಳಕೆ
ದೇಶ

ದೆಹಲಿಯಲ್ಲಿ ನಾಳೆ CJP ಪ್ರತಿಭಟನೆ : 23 ಸಾವಿರ ಭದ್ರತಾ ಸಿಬ್ಬಂದಿ ನಿಯೋಜನೆ, 150 ಬಾಡಿಕ್ಯಾಮ್ ಬಳಕೆ

Next Post
10 ಗಂಟೆಗಳ ಕಾಲ ಪೋಷಕರ ‘ಡಿಜಿಟಲ್ ಅರೆಸ್ಟ್’.. 8ನೇ ತರಗತಿ ಬಾಲಕನ ಜಾಣ್ಮೆಯಿಂದ ತಪ್ಪಿದ ಭಾರೀ ವಂಚನೆ!

10 ಗಂಟೆಗಳ ಕಾಲ ಪೋಷಕರ 'ಡಿಜಿಟಲ್ ಅರೆಸ್ಟ್'.. 8ನೇ ತರಗತಿ ಬಾಲಕನ ಜಾಣ್ಮೆಯಿಂದ ತಪ್ಪಿದ ಭಾರೀ ವಂಚನೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರನ್ ಹೊಳೆಯ ಇಂದೋರ್‌ನಲ್ಲಿಂದು ಇಂಡೋ-ವಿಂಡೀಸ್ 3ನೇ ಟಿ20 ಕದನ : ಬೌಲರ್‌ಗಳಿಗೆ ಕಠಿಣ ಸವಾಲು

ರನ್ ಹೊಳೆಯ ಇಂದೋರ್‌ನಲ್ಲಿಂದು ಇಂಡೋ-ವಿಂಡೀಸ್ 3ನೇ ಟಿ20 ಕದನ : ಬೌಲರ್‌ಗಳಿಗೆ ಕಠಿಣ ಸವಾಲು

“ವೈಭವ್ ಸೂರ್ಯವಂಶಿ ಬ್ಯಾಟಿಂಗ್ ಶೈಲಿ ನನ್ನಂತೆಯೇ ಇದೆ” : 15 ವರ್ಷದ ಯುವ ಪ್ರತಿಭೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ ವೀರೇಂದ್ರ ಸೆಹ್ವಾಗ್!

“ವೈಭವ್ ಸೂರ್ಯವಂಶಿ ಬ್ಯಾಟಿಂಗ್ ಶೈಲಿ ನನ್ನಂತೆಯೇ ಇದೆ” : 15 ವರ್ಷದ ಯುವ ಪ್ರತಿಭೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ ವೀರೇಂದ್ರ ಸೆಹ್ವಾಗ್!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

11 ಸುಳ್ಳು ಅತ್ಯಾಚಾರ ದೂರು ನೀಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕೋಲ್ಕತ್ತಾದ ಮಾಡೆಲ್ ಬಂಧನ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರನ್ ಹೊಳೆಯ ಇಂದೋರ್‌ನಲ್ಲಿಂದು ಇಂಡೋ-ವಿಂಡೀಸ್ 3ನೇ ಟಿ20 ಕದನ : ಬೌಲರ್‌ಗಳಿಗೆ ಕಠಿಣ ಸವಾಲು

ರನ್ ಹೊಳೆಯ ಇಂದೋರ್‌ನಲ್ಲಿಂದು ಇಂಡೋ-ವಿಂಡೀಸ್ 3ನೇ ಟಿ20 ಕದನ : ಬೌಲರ್‌ಗಳಿಗೆ ಕಠಿಣ ಸವಾಲು

“ವೈಭವ್ ಸೂರ್ಯವಂಶಿ ಬ್ಯಾಟಿಂಗ್ ಶೈಲಿ ನನ್ನಂತೆಯೇ ಇದೆ” : 15 ವರ್ಷದ ಯುವ ಪ್ರತಿಭೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ ವೀರೇಂದ್ರ ಸೆಹ್ವಾಗ್!

“ವೈಭವ್ ಸೂರ್ಯವಂಶಿ ಬ್ಯಾಟಿಂಗ್ ಶೈಲಿ ನನ್ನಂತೆಯೇ ಇದೆ” : 15 ವರ್ಷದ ಯುವ ಪ್ರತಿಭೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ ವೀರೇಂದ್ರ ಸೆಹ್ವಾಗ್!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat