ಬೆಂಗಳೂರು : ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ 5 ಸಾವಿರ ರೂ. ಹಾಗೂ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೀದಿ ನಾಯಿಗಳ ದಾಳಿಗೆ ತುತ್ತಾಗಿ ಗಾಯಗೊಂಡವರಿಗೆ ನೀಡುವ ಪರಿಹಾರ ಹಣದಲ್ಲಿ ಚಿಕಿತ್ಸೆ ವೆಚ್ಚವಾಗಿ 1,500 ರೂ. ಹಾಗೂ ಗಾಯಗೊಂಡ ಸಂತ್ರಸ್ತರಿಗೆ 3,500 ರೂ. ಪಾವತಿಯಾಗಲಿದೆ. ಬೀದಿ ನಾಯಿಗಳ ದಾಳಿಯಿಂದ ಮೃತಪಟ್ಟವರಿಗೆ ಅಥವಾ ರೇಬೀಸ್‌ನಿಂದ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ.
ಇನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಕಡಿತಕ್ಕೆ ಒಳಗಾಗುವ ನಾಗರಿಕರಿಗೆ ಸಂಬಂಧಿಸಿದಂತೆ, ಪರಿಶೀಲನಾ ಮತ್ತು ಪರಿಹಾರಧನ ವಿತರಿಸುವ ಸಮಿತಿಯನ್ನು ರಚಿಸಲಾಗುತ್ತದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಿದೆ.
ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರು ತಮಿಳುನಾಡಿನಲ್ಲಿ ನಾಯಿ ಕಡಿತ ಮತ್ತು ರೇಬೀಸ್ ಸಂಬಂಧಿತ ಸಾವುಗಳ ಸಂಖ್ಯೆಯಲ್ಲಿನ ಆತಂಕಕಾರಿ ಏರಿಕೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಈ ವರ್ಷವಷ್ಟೇ ರಾಜ್ಯದಲ್ಲಿ ಸುಮಾರು 5.25 ಲಕ್ಷ ನಾಯಿ ಕಡಿತ ಪ್ರಕರಣಗಳು ಮತ್ತು 28 ರೇಬೀಸ್‌ನಿಂದ ಸಾವುಗಳು ದಾಖಲಾಗಿವೆ ಎಂದು ದತ್ತಾಂಶ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ:ಮಸೂದೆಗಳಿಗೆ ಒಪ್ಪಿಗೆ ನೀಡಲು ರಾಜ್ಯಪಾಲರಿಗೆ ಕಾಲಮಿತಿ ಇಲ್ಲ, ಆದರೆ ‘ವಿಳಂಬ’ ಸಲ್ಲ : ಸುಪ್ರೀಂ ಕೋರ್ಟ್



















