ಹಾವೇರಿ: ಕಾಂಗ್ರೆಸ್ (Congress) ಪಕ್ಷದ ವತಿಯಿಂದ ನಡೆದಿದ್ದ ಗಾಂಧಿ ಭಾರತ ಸಮಾವೇಶದಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದ ಕಾಂಗ್ರೆಸ್ ಕಾರ್ಯಕರ್ತರೊಬ್ಬರ ಕುಟುಂಬಕ್ಕೆ ಪರಿಹಾರ ನೀಡಲಾಗಿದೆ.
ಬೆಳಗಾವಿಯಲ್ಲಿ ನಡೆದ ಗಾಂಧಿ ಭಾರತ ಸಮಾವೇಶದಲ್ಲಿ ಭಾಗಿಯಾಗಿ ಹೃದಯಾಘಾತದಿಂದಾಗಿ ಸಾವನ್ನಪ್ಪಿದ್ದ ಕಾರ್ಯಕರ್ತರೊಬ್ಬರ ಕುಟುಂಬಕ್ಕೆ ಕೆಪಿಸಿಸಿ ವತಿಯಿಂದ 5 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಲಾಯಿತು.
ಹಾವೇರಿ (Haveri) ಜಿಲ್ಲೆ ರಾಣೆಬೆನ್ನೂರು ತಾಲೂಕಿನ ನದಿಹರಳಹಳ್ಳಿ ಗ್ರಾಮದ ಬಸಪ್ಪ ಕೆಂಚಪ್ಪ ಪಾಮೇನಹಳ್ಳಿ ಎಂಬ ಕಾರ್ಯಕರ್ತ ಹೃದಯಾಘಾತಕ್ಕೆ ಬಲಿಯಾಗಿದ್ದರು. ಮೃತರ ಕುಟುಂಬಸ್ಥರು ಪರಿಹಾರ ನೀಡುವಂತೆ ಶಾಸಕ ಪ್ರಕಾಶ್ ಕೋಳಿವಾಡಗೆ ಮನವಿ ಮಾಡಿದ್ದರು.ಇದಕ್ಕೆ ಸರ್ಕಾರ ಸ್ಪಂದಿಸಿದ್ದು, ಭಾನುವಾರ ಶಾಸಕ ಪ್ರಕಾಶ್ ಕೋಳಿವಾಡ ಮೃತರ ಕುಟುಂಬಕ್ಕೆ ಚೆಕ್ ವಿತರಿಸಿದರು.